ಶನಿವಾರ, ಫೆಬ್ರವರಿ 27, 2021
30 °C

ಯಾದಗಿರಿ: ಪತ್ರಕರ್ತರ ಸಂಘದ ಅಧ್ಯಕ್ಷ ಪದಗ್ರಹಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಇಂಧೂದರ ಸಿನ್ನೂರ ಪದಗ್ರಹಣ ಸಮಾರಂಭ ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆಯಿತು.

ಮಾಜಿ ಶಾಸಕ ಡಾ.ವೀರ ಬಸವಂತರೆಡ್ಡಿ ಮುದ್ನಾಳ ಮಾತನಾಡಿ, ವರದಿಗಾರರು ಸತ್ಯ ವಿಚಾರ ಬರೆಯಿರಿ. ಸಮಾಜಕ್ಕೆ ದಾರಿ ತೋರಿಸುವ ಕೆಲಸ ನಿಮ್ಮ ಮೇಲಿದೆ. ಜೊತೆಗೆ ನಿಷ್ಪಕ್ಷಪಾತವಾಗಿ ಸುದ್ದಿಗಳನ್ನು ಜನತೆಗೆ ನೀಡಬೇಕು ಎಂದು
ಸಲಹೆ ನೀಡಿದರು.

ರಾಜ್ಯ ಕಾರ್ಯದರ್ಶಿ ಸಂಜೀವರಾವ ಕುಲಕರ್ಣಿ ಮಾತನಾಡಿ, ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಕಟ್ಟಡವಿದ್ದು, ಇಲ್ಲಿಯೇ ಪತ್ರಿಕಾಗೋಷ್ಠಿಗಳು ನಡೆಯಲಿ. ನೂತನ ಸಂಘಕ್ಕೆ ಬೇಕಾದ ಸೌಲಭ್ಯಗಳನ್ನು ದೊರಕಿಸಿಕೊಡಲಿ ಎಂದು ಆಶಿಸಿದರು.

ನೂತನ ಅಧ್ಯಕ್ಷ ಇಂಧೂದರ ಸಿನ್ನೂರ ಮಾತನಾಡಿ, ಸಂಘಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತರಲು ಪ್ರಯತ್ನಿಸುವುದಾಗಿ ತಿಳಿಸಿದರು.

ಫೆಬ್ರವರಿ 2ರಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನಲ್ಲಿ ನಡೆಯುವ ಸರ್ವ ಸದಸ್ಯರ ಸಭೆಗೆ ಹಾಜರಾಗಬೇಕು ಎಂದು ಮನವಿ ಮಾಡಿದರು.

ಈ ವೇಳೆ ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ, ರಾಜ್ಯ ಪರಿಷತ್ ಸದಸ್ಯ ಅನಿಲ ದೇಶಪಾಂಡೆ, ಕಾರ್ಯದರ್ಶಿ ರವೀಂದ್ರ ಕುಲಕರ್ಣಿ, ಹಾಸ್ಯ ಕಲಾವಿದ ಬಸವರಾಜ ಮಹಾಮನಿ, ಬಿಜೆಪಿ ಯುವ ಮುಖಂಡ ಮಹೇಶರೆಡ್ಡಿ ಮುದ್ನಾಳ, ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ವಿಶ್ವನಾಥ ಸಿರವಾರ ಸೇರಿದಂತೆ ಜಿಲ್ಲೆಯ ಪತ್ರಕರ್ತರು ಇದ್ದರು. ಪತ್ರಕರ್ತ ಲಕ್ಷ್ಮೀಕಾಂತ ಕುಲಕರ್ಣಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು