ಯಾದಗಿರಿ: ಕಲಬುರಗಿ ವಿಭಾಗದಲ್ಲಿ ಬಿಸಿಲಿನ ತಾಪಮಾನದಿಂದಾಗಿ ಪ್ರಸ್ತುತ ಮೇ ತಿಂಗಳ ಅಂತ್ಯದ ವರೆಗಿನ ಬೆಳಿಗ್ಗೆ 8ರಿಂದ ಮಧ್ಯಾಹ್ನ 1.30ರ ವರೆಗಿನ ಸರ್ಕಾರಿ ಕಚೇರಿಯ ಸಮಯದಲ್ಲಿ ಆಡಳಿತಾತ್ಮಕ ಸಮಸ್ಯೆಯನ್ನು ಪರಿಗಣಿಸಿ ಸಾರ್ವಜನಿಕ ಹಿತದೃಷ್ಟಿಯಿಂದ ಕಚೇರಿ ಸಮಯವನ್ನು ಮರುಬದಲಾವಣೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿಸಿ ಸಿಇಒ ಲವೀಶ್ ಒರಡಿಯಾ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಚೇರಿಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಇನ್ನು ಮುಂದೆ ಬೆಳಿಗ್ಗೆ 10ರಿಂದ ಸಂಜೆ 5.30ರ ವರೆಗೆ ಕೆಲಸ ನಿರ್ವಹಿಸಬೇಕು. ಬದಲಾದ ಸಮಯಕ್ಕೆ ಕಚೇರಿಯ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಬೆಳಗಿನ ಅವಧಿಯಲ್ಲಿ ಸಿಬ್ಬಂದಿ ವಿಳಂಬವಾಗಿ ಬರುತ್ತಿರುವುದರಿಂದ ಕಡತಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿದೆ. ಉನ್ನತಾಧಿಕಾರಿಗಳು ಆಯೋಜಿಸುವ ಮಹತ್ವದ ಸಭೆಗಳು ಹಾಗೂ ರಾಜ್ಯ ಮಟ್ಟದ ಕಚೇರಿಗಳಿಗೆ ಅಗತ್ಯ ಮಾಹಿತಿ ಸಮಯಕ್ಕೆ ಸರಿಯಾಗಿ ಒದಗಿಸಲು ತೊಂದರೆ ಆಗುತ್ತಿದೆ. ಮೇ 29, 30ರಂದು ಉಪಲೋಕಾಯುಕ್ತರು ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಈ ಸಭೆಗೆ ಅಗತ್ಯ ಪೂರ್ವಸಿದ್ಧತಾ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-30-386715668

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.