ಹುಣಸಗಿ (ಕೊಡೇಕಲ್ಲ): ವಚನಗಳ ಮೂಲಕ ಸಮಾನತೆ ತತ್ವವನ್ನು ಸಾರಿದ ಕಾಲಜ್ಞಾನಿ ಕೊಡೇಕಲ್ಲ ಬಸವೇಶ್ವರರ ಜಾತ್ರೆಯ ಅಂಗವಾಗಿ ಜೋಡು ಪಲ್ಲಕ್ಕಿಯ ಉತ್ಸವವು ಶುಕ್ರವಾರ ಸಂಭ್ರಮದಿಂದ ಜರುಗಿತು.

ಬಸವ ಪರಂಪರೆಯ ಪೀಠದ 15ನೇ ಪೀಠಾಧಿಪತಿ ವೃಷಭೇಂದ್ರ ಅಪ್ಪನವರ ಸಾನ್ನಿಧ್ಯದಲ್ಲಿ ಗುರುವಾರ ಜೋಡು ಪಲ್ಲಕ್ಕಿಗಳಿಗೆ ಬಂಗಾರ ಹಾಗೂ ಬೆಳ್ಳಿಯ ಕಳಸಾರೋಹಣ ಹಾಗೂ ಅಷ್ಟವಿಧಾರ್ಚನೆ ಪೂಜೆ ನಡೆಯಿತು.

ಶುಕ್ರವಾರ ಬೆಳಿಗ್ಗೆ ಬಸವೇಶ್ವರರ ಐಕ್ಯಸ್ಥಳ (ಊರಾನ ಗುಡಿ)ಯ ರಾಜಗಟ್ಟೆಯ ಮೇಲೆ ಅಲಂಕರಿಸಲಾಗಿದ್ದ ಜೋಡು ಪಲ್ಲಕ್ಕಿಗಳಿಗೆ ವೃಷಭೇಂದ್ರರು ಹಾಗೂ ಅರಸು ಮನೆತನದವರು ಪೂಜೆ ಸಲ್ಲಿಸುವುದರ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು.

ಜೋಡು ಪಲ್ಲಕ್ಕಿ ಉತ್ಸವದಲ್ಲಿ ಸಹಸ್ರಾರು ಭಕ್ತರು ‘ಕೊಡೇಕಲ್ಲ ಬಸವೇಶ್ವರ ಮಹಾರಾಜ ಕೀ ಜೈ’ ಎಂಬ ಜಯಘೋಷ ಮೊಳಗಿಸಿದರು. ಜಿಲ್ಲೆ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಭಕ್ತರು ಜೋಡು ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡು ಭಕ್ತಿ ಸಮರ್ಪಿಸಿದರು.

ದಾರಿಯುದ್ದಕ್ಕೂ ಉತ್ಸವವನ್ನು ವೀಕ್ಷಿಸಿದ ಮಹಿಳೆಯರು ಮಕ್ಕಳು ಹೂ, ಉತ್ತತ್ತಿ, ಬಾಳೆಹಣ್ಣು ಎಸೆದು ತಮ್ಮ ಹರಕೆ ತೀರಿಸಿದರು. ಜೋಡು ಪಲ್ಲಕ್ಕಿಗಳ ಮುಂದೆ ಕಾಲಜ್ಞಾನದ ವಚನಗಳನ್ನು ಪಠಿಸುತ್ತಾ ಹಿಮ್ಮುಖವಾಗಿ ನಡೆದುಕೊಂಡು ಹೋಗುತ್ತಿರುವುದು ಕಂಡು ಬಂತು. ಹುಣಸಗಿ ತಾಲ್ಲೂಕು ಸೇರಿದಂತೆ ವಿಜಯಪುರ, ರಾಯಚೂರು, ಬಾಗಲಕೋಟೆ, ಸೊಲ್ಲಾಪುರ ಹಾಗೂ ಜಿಲ್ಲೆಯ ಹಾಗೂ ವಿವಿಧ ಗ್ರಾಮಗಳಿಂದ ಸಹಸ್ರಾರು ಭಕ್ತರು ಉತ್ಸವದಲ್ಲಿ ಪಾಲ್ಗೊಂಡಿದ್ದರು.

ಭಕ್ತರಿಗಾಗಿ ತಂಪು ಪಾನೀಯ ವ್ಯವಸ್ಥೆ: ಬೇಸಿಗೆ ಇದ್ದಿದ್ದರಿಂದ ಬಿಸಿಲು ಹೆಚ್ಚಾಗಿದ್ದರಿಂದಾಗಿ ಬೆಳಿಗ್ಗೆಯಿಂದಲೇ ಕೆಲವು ಆಸಕ್ತ ಭಕ್ತರು ಸ್ವಯಂಪ್ರೇರಿತರಾಗಿ ಜಾತ್ರೆಗೆ ಆಗಮಿಸಿದ ಭಕ್ತರಿಗೆ ಶುದ್ಧ ಕುಡಿಯುವ ನೀರು, ತಂಪು ಪಾನೀಯದ ವ್ಯವಸ್ಥೆ ಮಾಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-30-1894155161

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.