ವಡಗೇರಾ: ತಾಲ್ಲೂಕಿನ ಕೋಡಾಲ ಗ್ರಾಮದಲ್ಲಿ ಕಳೆದ 15 ದಿನದ ಹಿಂದೆ ಗಾಳಿಗೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಗ್ರಾಮದ ಮುಖಂಡ ಸೋಮು ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಗ್ರಾಮದಲ್ಲಿ ಸುಮಾರು ವರ್ಷಗಳ ಹಿಂದೆ ಹಾಕಿರುವ ವಿದ್ಯುತ್ ಕಂಬಗಳು ಬಹಳ ಹಳೆಯದಾಗಿವೆ. ಅವು ಸ್ವಲ್ಪ ಗಾಳಿ ಬಿಟ್ಟರೆ ಬೀಳುವ ಹಂತದಲ್ಲಿವೆ. ಕಂಬ ಬಿದ್ದ ದಿನವೇ ಜೆಸ್ಕಾಂ ಅಧಿಕಾರಿಗಳು ಬಂದು ನೋಡಿಕೊಂಡು ಹೋಗಿದ್ದಾರೆ. ಆದರೆ ಇಲ್ಲಿಯವರೆಗೂ ಅದನ್ನು ತೆರವುಗೊಳಿಸಿ ಹೊಸ ಕಂಬ ಅಳವಡಿಸುವ ಕೆಲಸ ಮಾಡಿಲ್ಲ. ಈ ಕಂಬದಲ್ಲಿ ನಿರಂತರವಾಗಿ ವಿದ್ಯುತ್ ಹರಿಯುತ್ತಿದೆ. ಗ್ರಾಮದ ಮುಖ್ಯ ರಸ್ತೆ ಇದಾಗಿದ್ದು, ವಾಹನ ಸವಾರರು, ಜನ, ಜಾನುವಾರುಗಳು ನಿತ್ಯ ಈ ರಸ್ತೆಯ ಮೂಲಕವೇ ಹೋಗಬೇಕು. ಏನಾದರೂ ಅನಾಹುತ ಆದರೆ ಹೊಣೆಗಾರರು ಯಾರು ಎಂದು ಪ್ರಶ್ನಿಸಿದ್ದಾರೆ. ಸಂಬಂಧಪಟ್ಟ ಜೆಸ್ಕಾಂ ಇಲಾಖೆಯ ಅಧಿಕಾರಿಗಳು ಕೂಡಲೇ ವಿದ್ಯುತ್ ಕಂಬ ಬದಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-30-1014911519

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.