ಬುಧವಾರ, ಜೂನ್ 16, 2021
21 °C

ಯಾದಗಿರಿ: 107 ಜನರಿಗೆ ಕೋವಿಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಜಿಲ್ಲೆಯಲ್ಲಿ ಬುಧವಾರ ಮತ್ತೆ 107 ಜನರಲ್ಲಿ ಕೋವಿಡ್‌ ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 3,338ಕ್ಕೆ ಏರಿಕೆಯಾಗಿದೆ. 25 ಜನರು ಗುಣಮುಖರಾಗಿದ್ದು, ಒಟ್ಟಾರೆ 2,241 ಜನ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. 1,078 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರ ಪತ್ತೆ ಕಾರ್ಯದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ತೊಡಗಿಸಿಕೊಂಡಿದ್ದಾರೆ.

ಇಬ್ಬರು ಸಾವು: 65 ವರ್ಷದ ಪುರುಷ ಜುಲೈ 31ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 11 ರಂದು ನಿಗದಿತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 65 ವರ್ಷದ ಮತ್ತೊಬ್ಬ ಪುರುಷ ಆಗಸ್ಟ್ 7ರಂದು ಆಸ್ಪತ್ರೆಗೆ ದಾಖಲಾಗಿ 10ರಂದು ಮೃತಪಟ್ಟಿದ್ದಾರೆ. ಇದರಿಂದ ಸಾವಿನ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

107 ಪ್ರಕರಣಗಳಲ್ಲಿ 56 ಜನ ಯಾದಗರಿ ನಗರ ಮತ್ತು ಗ್ರಾಮೀಣ ಪ್ರದೇಶವರು, 30 ಜನ ಶಹಾಪುರ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ಭಾಗದವರು, ಸುರಪುರ ನಗರ ಹಾಗೂ ಗ್ರಾಮೀಣ ಪ್ರದೇಶದ 21 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.