ಮಂಗಳವಾರ, ಆಗಸ್ಟ್ 3, 2021
26 °C

ಯಾದಗಿರಿಯಲ್ಲಿ ಕೋವಿಡ್‌ ಲ್ಯಾಬ್ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ತಾಲ್ಲೂಕಿನ ಮುದ್ನಾಳ ಸಮೀಪದ ಹೊಸ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್‌ ಪರೀಕ್ಷೆ ನಡೆಸುವ ಆರ್‌ಟಿಪಿಸಿಆರ್ ಲ್ಯಾಬ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಶುಕ್ರವಾರ ಉದ್ಘಾಟಿಸಿದರು.

ಲ್ಯಾಬ್ ಪರಿಶೀಲಿಸಿದ ಸಚಿವ, ಲ್ಯಾಬ್ ಕಾರ್ಯನಿರ್ವಹಣೆ ಕುರಿತ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಸರ್ಕಾರದ ಮಾರ್ಗಸೂಚಿ ಅನ್ವಯ ಮುಂಜಾಗ್ರತಾ ಕ್ರಮಗಳೊಂದಿಗೆ ಮಾದರಿಗಳನ್ನು ಪರೀಕ್ಷೆ ಮಾಡಬೇಕು. ಪರೀಕ್ಷೆಯಲ್ಲಿ ಲೋಪ ಕಂಡುಬರಬಾರದು. ಲ್ಯಾಬ್‍ನಲ್ಲಿ ಕಾರ್ಯನಿರ್ವಹಿಸುವ ತಂತ್ರಜ್ಞರು ಮತ್ತು ಸಿಬ್ಬಂದಿ ವೈಯಕ್ತಿಕ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು.

ಮೊಬೈಲ್ ಫೀವರ್ ಕ್ಲಿನಿಕ್‍ಗೆ ಚಾಲನೆ:

ನಂತರ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಮೊಬೈಲ್ ಫೀವರ್ ಕ್ಲಿನಿಕ್ ಹಾಗೂ ಸ್ವಾಬ್ ಸಂಗ್ರಹಣ ಬಸ್‍ಗಳನ್ನು ಸಚಿವ ಉದ್ಘಾಟಿಸಿದರು.

ಈ ವೇಳೆ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್, ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಉಪವಿಭಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು