ಯಾದಗಿರಿ: ಪರವಾನಗಿ ಪಡೆದ ಭೂಮಾಪಕರ ಬೇಡಿಕೆಗಳನ್ನು ಈಡೇರಿಸಿ, ಅವರ ಸೇವೆಯನ್ನು ಕಾಯಂ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಮುಖಂಡರು ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕೋಲಾರ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಆಗ್ರಹಿಸಿ ಪರವಾನಗಿ ಭೂಮಾಪಕರು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಭೂಮಾಪನ ಇಲಾಖೆಯ ಕೆಲಸಗಳು ಸ್ಥಗಿತವಾಗಿವೆ. ಜಮೀನಿನ ಅಳತೆ, ಫಾರಂ 10, ಪಹಣಿ ಅನ್ವಯ ಭೂಮಿ ಹದ್ದುಬಸ್ತು ಸೇರಿ ಇತರೆ ಅರ್ಜಿಗಳ ವಿಲೇವಾರಿಗೆ ಅಡ್ಡಿಯಾಗುತ್ತಿದೆ ಎಂದರು.

ಒಂದು ತಿಂಗಳಿನಿಂದ ಮುಷ್ಕರ ನಡೆಸುತ್ತಿದ್ದು, ಅವರಿಗೆ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಸರ್ಕಾರ ತಕ್ಷಣವೇ ಅವರ ಬೇಡಿಕೆ ಈಡೇರಿಸಿ, ಜಮೀನಿನ ಅಳತೆಯ ವಹಿವಾಟಿನ ಕಾರ್ಯಗಳಿಗೆ ಅನುಕೂಲ ಮಾಡಿಕೊಡಬೇಕು. ವಿಳಂಬ ಮಾಡಿದರೆ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಘದ ಉತ್ತರ ಕರ್ನಾಟಕ ಅಧ್ಯಕ್ಷ ದೇವಿಂದ್ರಪ್ಪಗೌಡ, ಜಿಲ್ಲಾ ಉಪಾಧ್ಯಕ್ಷ ಅಶೋಕ ಸಾಹುಕಾರ, ಕಲ್ಯಾಣ ಕರ್ನಾಟಕ ಉಪಾಧ್ಯಕ್ಷ ಎಂ.ಡಿ.ಮೊಹಮ್ಮದ್ ಚಿಂತಕುಂಟಾ, ಪ್ರಮುಖರಾದ ಸಾಹೇಬಗೌಡ ನಾಲ್ವಡಿಗಿ, ಕೃಷ್ಣ ವೀರಶೆಟ್ಟಿ, ಭೀಮಶೇಪ್ಪ ನಕ್ಕ, ಭಾಸ್ಕರರೆಡ್ಡಿ, ವಿಶ್ವನಾಥ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-30-293057856

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.