ಯಾದಗಿರಿ: ರಾಜ್ಯದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಮೇ 29 ಹಾಗೂ 30ರಂದು ಜಿಲ್ಲೆಗೆ ಭೇಟಿ ನೀಡಿ ಸಭೆಗಳನ್ನು ನಡೆಸಿ, ಸಮಾಲೋಚನೆ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

28ರ ರಾತ್ರಿ ಬೆಂಗಳೂರಿನಿಂದ ರೈಲು ಮೂಲಕ ಹೊರಟು 29ರ ಬೆಳಿಗ್ಗೆ 4ಕ್ಕೆ ಯಾದಗಿರಿಗೆ ಬರುವರು. ನಗರದ ಲೋಕೋಪಯೋಗಿ ಇಲಾಖೆ ಸರ್ಕ್ಯೂಟ್ ಹೌಸ್ನಲ್ಲಿ ವಾಸ್ತವ್ಯ ಮಾಡುವರು. ಅಂದು ಬೆಳಿಗ್ಗೆ 9ಕ್ಕೆ ಕಾರ್ಯಕ್ರಮವೊಂದನ್ನು ಉದ್ಘಾಟಿಸುವರು. 10ರಿಂದ ಮಧ್ಯಾಹ್ನ ಸಂಜೆ 5.30ರ ವರೆಗೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ದೂರುದಾರರು, ಪ್ರತಿವಾದಿಗಳ ಉಪಸ್ಥಿತಿಯಲ್ಲಿ ಬಾಕಿ ಇರುವ ದೂರುಗಳ ವಿಚಾರಣೆ ನಡೆಸುವರು.

30ರ ಬೆಳಿಗ್ಗೆ 8ರಿಂದ ಬೆಳಿಗ್ಗೆ 10ರ ವರೆಗೆ ಜಿಲ್ಲೆಯ ವಿವಿಧ ಸ್ಥಳಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡುವರು. ಬೆಳಿಗ್ಗೆ 11ರಿಂದ ಮಧ್ಯಾಹ್ನ 12ರವರೆಗೆ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ‘ಸಾರ್ವಜನಿಕ ಆಡಳಿತದಲ್ಲಿ ನ್ಯಾಯಾಂಗ ಅಧಿಕಾರಿಗಳು ಹಾಗೂ ನ್ಯಾಯವಾದಿಗಳ ಕರ್ತವ್ಯ’ ಕುರಿತು ಸಭೆ ಹಾಗೂ ಸಮಾಲೋಚನೆ ನಡೆಸುವರು. ಸಂಜೆ 4ಕ್ಕೆ ಜಿಲ್ಲೆಯ ವಿವಿಧ ಸ್ಥಳಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-30-870562912

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.