ಯಾದಗಿರಿ: ರಾಜ್ಯ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಮೇ 29 ಹಾಗೂ 30ರಂದು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದು, ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ದೂರುಗಳ ವಿಚಾರಣೆ ಹಾಗೂ ವಿಲೇವಾರಿ ಮಾಡಲಿದ್ದಾರೆ. ಲೋಕಾಯುಕ್ತ ಕಚೆರಿಯಿಂದ ನೋಟಿಸ್ ಜಾರಿ ಮಾಡಿದ ದೂರುದಾರರು ಮೇ 29ರ ವಿಚಾರಣೆಗೆ ಹಾಜರಾಗಬೇಕು ಎಂದು ಲೋಕಾಯುಕ್ತ ಡಿವೈಎಸ್ಪಿ ಜೆ.ಎಚ್. ಇನಾಮದಾರ್ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ ಜಿಲ್ಲಾಧಿಕಾರಿ ಕಚೇರಿಯ ಆಡಿಟೋರಿಯಂ ಹಾಲ್ನಲ್ಲಿ ದೂರುಗಳ ವಿಚಾರಣೆ ಹಾಗೂ ವಿಲೇವಾರಿ ನಡೆಯಲಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಸಂಬಂಧಿಸಿದ ದೂರುಗಳನ್ನು ಮಾತ್ರ ವಿಚಾರಣೆ ಮಾಡುವರು. ನೋಟಿಸ್ ಜಾರಿ ಮಾಡಲಾಗಿರುವ ದೂರುದಾರರು ಮಾತ್ರ ವಿಚಾರಣೆಗೆ ಹಾಜರಾಗಲು ಅವಕಾಶವಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ವಿಚಾರಣೆಯ ವೇಳೆ ಸಾರ್ವಜನಿಕರ ಹೊಸ ದೂರುಗಳನ್ನು ಸ್ವೀಕರಿಸುವುದಿಲ್ಲ. ಯಾವುದೇ ದೂರುಗಳಿದ್ದಲ್ಲಿ ಲೋಕಾಯುಕ್ತ ಕಚೇರಿಗೆ ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕು ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-30-1108208676

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.