ಯಾದಗಿರಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಮಹೇಶರೆಡ್ಡಿ ಮುದ್ನಾಳ ಅವರನ್ನು ನೇಮಕ ಮಾಡಲಾಗಿದೆ ಎಂದು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಮಹಾಸಭಾದ ಉಗಮ, ಬೆಳವಣಿಗೆಯಲ್ಲಿ ಮುದ್ನಾಳ ಮನೆತನದ ಕೊಡುಗೆ ಇದೆ. ಮಾಜಿ ಮಂತ್ರಿ, ಸ್ವಾತಂತ್ರ್ಯ ಹೋರಾಟಗಾರ ದಿ.ವಿಶ್ವನಾಥರೆಡ್ಡಿ ಮುದ್ನಾಳ ಹಾಗೂ ಮಾಜಿ ಶಾಸಕ ದಿ.ವೆಂಕಟರೆಡ್ಡಿ ಮುದ್ನಾಳ ಅವರು ದಶಕಗಳ ಕಾಲ ಮಹಾಸಭಾದ ಸಂಘಟನೆಯಲ್ಲಿ ಪದಾಧಿಕಾರಿಗಳಾಗಿ ಕೆಲಸ ಮಾಡಿದ್ದಾರೆ. ಆ ಮೂಲಕ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಧ್ಯಕ್ಷ ಈಶ್ವರ್ ಖಂಡ್ರೆ, ರಾಜ್ಯ ಘಟಕದ ಅಧ್ಯಕ್ಷ ಶಂಕರ ಬಿದರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಶರಣಬಸಪ್ಪ ದರ್ಶನಾಪುರ ಅವರು ಸೇರಿದಂತೆ ವೀರಶೈವ ಲಿಂಗಾಯತ ಮಹಾಸಭಾದ ಪದಾಧಿಕಾರಿಗಳು, ಮುಖಂಡರು ನಾಯಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-30-1359807250

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.