ಯಾದಗಿರಿ: ಯಾದಗಿರಿ ಮತ ಕ್ಷೇತ್ರದ ಶಾಸಕರಿಂದಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಸರಿಯಾಗಿ ನಡೆಯುತ್ತಿಲ್ಲ. ಕೆಕೆಆರ್ಡಿಬಿ ಸೇರಿದಂತೆ ಇತರೆ ಅನುದಾನ ಲೂಟಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಗರದ ಮೈಲಾಪುರ ಅಗಸಿಯಲ್ಲಿ ಬಿಜೆಪಿ ಯಾದಗಿರಿ ನಗರ ಮಂಡಲ ಮತ್ತು ಗ್ರಾಮೀಣ ಮಂಡಲದ ಕಾರ್ಯಕರ್ತರು ಜಮಾಯಿಸಿದರು. ‘ಭ್ರಷ್ಟಾಚಾರದಲ್ಲಿ ಮುಳುಗಿದ ನಗರಸಭೆ’, ‘ಕೆಕೆಆರ್ಡಿಬಿ ಹಣ ಲೂಟಿ ಕಾಮಗಾರಿ ಶೂನ್ಯ’, ‘ಸರ್ವೆ ಕಾರ್ಯ ಮುಚ್ಚಿದ ಸರ್ಕಾರಕ್ಕೆ ಧಿಕ್ಕಾರ’, ‘ಕಮಿಷನರ್ ಶಾಸಕರೇ ಅಭಿವೃದ್ಧಿ ಯಾವಾಗ’, ಖಾಲಿ ಭರವಸೆ ನೀಡುವ ಶಾಸಕರಿಗೆ ಧಿಕ್ಕಾರ’... ಎಂಬ ನಾಮಫಲಕಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.

ಮೈಲಾಪುರ ಅಗಸಿಯಿಂದ ಶಿವಾಜಿ ವೃತ್ತ, ಗಾಂಧಿ ವೃತ್ತ, ಹಳೇ ಅಗಸಿ ಮಾರ್ಗವಾಗಿ ನಗರಸಭೆವರೆಗೆ ಪ್ರತಿಭಟನಾ ಮೆರವಣಿಗೆ ಮಾಡಿದರು. ಮೆರವಣಿಗೆಯ ಉದ್ದಕ್ಕೂ ಶಾಸಕರು ಹಾಗೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಗರಸಭೆ ಮುಂಭಾಗದಲ್ಲಿ ಪಕ್ಷದ ಮುಖಂಡರು ವಾಗ್ದಾಳಿ ನಡೆಸಿ, ಟೀಕಾ ಪ್ರಹಾರ ಮಾಡಿದರು.

‘ರಾಜ್ಯ ಸರ್ಕಾರದ ದುರಾಡಳಿತ ಮತ್ತು ನಿರ್ಲಕ್ಷ್ಯ ಧೋರಣೆಯಿಂದ ರಾಜ್ಯದ ಜನತೆಯಲ್ಲಿ ಆತಂಕವಾಗಿ ಎಂತಹ ಸರ್ಕಾರ ಆರಿಸಿದ್ದಾಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಹದೆಗೆಟ್ಟಿದ್ದು, ಸಾರ್ವಜನಿಕರ ಬೇಕು-ಬೇಡಿಕೆಗಳಿಗೆ ಸ್ಪಂದಿಸದೇ ಮನಸೋ ಇಚ್ಛೆ ವರ್ತಿಸುತ್ತಿದೆ’ ಎಂದು ದೂರಿದರು.

‘ನಗರದ ಮುಖ್ಯ ರಸ್ತೆಗಳಲ್ಲಿ ತಡೆಗೋಡೆ ನಿರ್ಮಾಣ ಮತ್ತು ಬೀದಿ ದೀಪಗಳ ಅಳವಡಿಕೆಯಲ್ಲಿ ಕಳಪೆ ಗುಣಮಟ್ಟ ಎದ್ದು ಕಾಣುತ್ತಿದೆ. ಈ ದಿಸೆಯಲ್ಲಿ ಶಾಸಕರ ಮೌನ ಅನುಮಾನಕ್ಕೆ ಆಸ್ಪದ ಮಾಡಿಕೊಡುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು, ಮಕ್ಕಳು ಮತ್ತು ರೋಗಿಗಳಿಗೆ ಸಕಾಲಕ್ಕೆ ಚಿಕಿತ್ಸೆ, ಔಷಧಗಳು ಸಿಗದೆ ಪರದಾಡುತ್ತಿದ್ದಾರೆ’ ಎಂದು ಹೇಳಿದರು.

‘ನಗರಸಭೆಯಲ್ಲಿ ತಿದ್ದುಪಡಿ ಮತ್ತು ಹೊಸ ಖಾತಾ ನವೀಕರಣಕ್ಕಾಗಿ ಸಾರ್ವಜನಿಕರಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿದ್ದು, ಇದನ್ನು ನಿಲ್ಲಿಸಬೇಕು. 2021-22ನೇ ಸಾಲಿನ ನಗರೋತ್ಥಾನ ಕಾಮಗಾರಿಗಳ ಕ್ರಿಯಾ ಯೋಜನೆಯಲ್ಲಿ ಅಧಿಕಾರಿಗಳ ಹಾಗೂ ಶಾಸಕರ ಕೈವಾಡ ಎದ್ದು ಕಾಣುತ್ತಿದೆ. ತಕ್ಷಣ ಅದನ್ನು ರದ್ದುಪಡಿಸಬೇಕು. ಸಬ್ರಜಿಸ್ಟರ್ ಕಚೇರಿಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿ ಹಗಲು ದರೋಡೆ ನಡೆಯುತ್ತಿದೆ. ಅದನ್ನು ನಿಯಂತ್ರಿಸಬೇಕು’ ಎಂದು ಆಗ್ರಹಿಸಿದರು.

‘ಯಾದಗಿರಿ ಮತಕ್ಷೇತ್ರದ ತುಂಬಾ ಮರಳು ಮಾಫಿಯಾ ಎಗ್ಗಿಲ್ಲದೆ ನಡೆಯುತ್ತಿದೆ. ಇದಕ್ಕೆ ಶಾಸಕರು, ಪೊಲೀಸ್ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಕುಮ್ಮಕ್ಕು ಇದೆ. ಇದನ್ನು ಕೂಡಲೇ ನಿಯಂತ್ರಿಸಬೇಕಿದೆ. ರಾಷ್ಟ್ರೀಯ ಹೆದ್ದಾರಿ– 150 ಬೈಪಾಸ್ ರಸ್ತೆಯ ಸರ್ವೆ ಕಾರ್ಯ ತಾಂತ್ರಿಕ ದೋಷದಿಂದ ರೈತರಿಗೆ ಅನ್ಯಾಯವಾಗುತ್ತಿದ್ದು, ಅದನ್ನು ಸರಿಪಡಿಸಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಎಸ್ಪಿ ಪೃಥ್ವಿಕ್ ಶಂಕರ್ ಉಪಸ್ಥಿತರಿದ್ದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜಪ್ಪ ವಿಭೂತಿಹಳ್ಳಿ, ವಿಭಾಗ ಸಹ ಪ್ರಭಾರಿ ಶರಣಪ್ಪ ತಳವಾರ, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ ಕಾಡಂನೋರ, ಮಹಿಳಾ ಮೋರ್ಚಾ ಅಧ್ಯಕ್ಷೆ ಸುನಿತಾ ಚವ್ಹಾಣ್, ಮುಖಂಡರಾದ ರಾಚನಗೌಡ ಮುದ್ನಾಳ, ಡಾ. ಶರಣಭೂಪಾಲರೆಡ್ಡಿ, ಪರಶುರಾಮ್ ಕುರುಕುಂದಿ, ರಮೇಶ ದೊಡ್ಮನಿ, ಮಲ್ಲಿಕಾರ್ಜುನ ಕಟ್ಟಿಮನಿ, ಸಿದ್ದಣ್ಣಗೌಡ ಕಾಡಂನೋರ, ಸಿದ್ದಪ್ಪ ಹೊಟ್ಟಿ, ಖಂಡಪ್ಪ ದಾಸನ್, ಸದಾಶಿವಪ್ಪಗೌಡ ರೋಟ್ನಡಗಿ, ಮಲ್ಲಣ್ಣಗೌಡ ಹತ್ತಿಕುಣಿ, ದೇವಿಂದ್ರನಾಥ ನಾದ್, ಹಣಮಂತ ಇಟಗಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-30-577061913

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.