ಯಾದಗಿರಿ: ಹೈದರಾಬಾದ್ ಗೋಶಾಲಾ ಮಹಲ್ ಕ್ಷೇತ್ರದ ಶಾಸಕ ರಾಜಾಸಿಂಗ್ ಠಾಕೂರ್ ಅವರಿಗೆ ಯಾದಗಿರಿ ಜಿಲ್ಲೆ ಪ್ರವೇಶಕ್ಕೆ ಒಂದು ತಿಂಗಳು ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ನಗರದಲ್ಲಿ ಗುರುವಾರ ಜೈ ಛತ್ರಪತಿ ಶಿವಾಜಿ ಮಹಾರಾಜ ಸೇನಾ ಹಾಗೂ ವೀರ ಸಾವರ್ಕರ ಸೇನಾ ವತಿಯಿಂದ ಆಯೋಜಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವದಲ್ಲಿ ದಿಕ್ಸೂಚಿ ಭಾಷಣ ಮಾಡಲು ಜಿಲ್ಲೆಗೆ ಬರುವವರಿದ್ದರು. ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತತೆಗೆ ಧಕ್ಕೆ ಉಂಟಾಗದಂತೆ ಮುಂಜಾಗೃತಾ ಕ್ರಮವಾಗಿ ಅವರಿಗೆ ನಿರ್ಬಂಧ ಹಾಕಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಯಾದಗಿರಿಯಲ್ಲಿ 2017ರಲ್ಲಿ ಹಮ್ಮಿಕೊಂಡಿದ್ದ ಹಿಂದೂ ವಿರಾಟ ಸಮಾವೇಶದಲ್ಲಿ ಪಾಲ್ಗೊಂಡಿದ್ದ ರಾಜಾಸಿಂಗ್, ಬಹಿರಂಗವಾಗಿ ಪ್ರಚೋದನಕಾರಿಯಾಗಿ ಮಾತನಾಡಿದ್ದರು. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧ ತೆಲಂಗಾಣದಲ್ಲಿಯೂ 100ಕ್ಕೂ ಹೆಚ್ಚು ಕ್ರಿಮಿನಲ್ ಮೊಕದ್ದಮೆಗಳಿದ್ದು, ಅವುಗಳಲ್ಲಿ 18 ಕೋಮು ಅಪರಾಧಕ್ಕೆ ಸಂಬಂಧಿಸಿವೆ. ಹಲವು ಕಡೆಗಳ ಭಾಷಣಗಳಲ್ಲಿ ವಿವಾದಾತ್ಮ ಹೇಳಿಕೆಗಳು ನೀಡಿದ್ದಾರೆ ಎಂದು ಹೇಳಿದ್ದಾರೆ.

ಯಾದಗಿರಿ ಸಿಪಿಐ ಹಾಗೂ ಡಿಎಸ್ಪಿ ಸಲ್ಲಿಸಿದ ವರದಿ ಹಾಗೂ ಶಿಫಾರಸಿನ ಮೇರೆಗೆ ಸಾರ್ವಜನಿಕ ಶಾಂತತೆ, ಸುವ್ಯವಸ್ಥೆಗೆ ಧಕ್ಕೆ ತರುವುದನ್ನು ತಡೆಯಲು ಶಾಸಕ ರಾಜಾಸಿಂಗ್ ಅವರಿಗೆ ಒಂದು ತಿಂಗಳು ನಿರ್ಬಂಧ ಹಾಕಲಾಗಿದೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-30-765090288

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.