ವಡಗೇರಾ: ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ, ಆಯಾ ಗ್ರಾಮ ಪಂಚಾಯತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳು, ಇತರ ಕಾಮಗಾರಿಗಳು ಕೈಗೊಂಡು, ಗ್ರಾಮೀಣ ಭಾಗದಲ್ಲಿ ಜನರು ಗುಳೆ ಹೋಗುವುದನ್ನು ತಡೆಗಟ್ಟಲು ನಿರಂತರ ಎನ್ಎಂಆರ್ ತೆಗೆದು ಸ್ಥಳೀಯ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡಬೇಕು’ ಎಂದು ಇಒ ಶಶಿಧರ ಹಿರೇಮಠ ಹೇಳಿದರು.

ತಾಲ್ಲೂಕ ಪಂಚಾಯಿತಿ ಸಭಾಂಗಣದಲ್ಲಿ ಇಒ ಶಶಿಧರ ಹಿರೇಮಠ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಆಯೋಜಿಸಿದ್ದ ಅಡ್ ಹಾಕ್ ಸಭೆಯಲ್ಲಿ ಅವರು ಮಾತನಾಡಿದರು.

‘ಶಾಲಾ ಅಭಿವೃದ್ಧಿ ಕಾಮಗಾರಿಗಳು, ಕಾಲುವೆ, ನಾಲ ಮತ್ತು ಕೆರೆ ಹೂಳೆತ್ತುವುದು ಸೇರಿದಂತೆ ಇತರ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ನಿಗದಿತ ಸಮಯದಲ್ಲಿ ಯೋಜನೆ ಗುರಿ ತಲುಪಬೇಕು ಯಾವುದೆ ಕಾರಣಕ್ಕೂ ಉದಸಿನತೆಯನ್ನು ಸಹಿಸುವುದಿಲ್ಲ’ ಎಂದು ಸೂಚಿಸಿದರು.

2014-15 ರಿಂದ 2024-25 ವರೆಗಿನ ಸಾಮಾಜಿಕ ಲೆಕ್ಕ ಪರಿಶೋಧನೆ ವರದಿಯ ಆಕ್ಷೇಪಣೆ ಹಾಗೂ ವಸೂಲಾತಿ ಕಂಡಿಕೆಗಳ ಸಮಸ್ಯೆ ಸ್ಥಳೀಯ ಲೆಕ್ಕ ಪರಿಶೋಧನಾ ಹಾಗೂ ಸಾಮಾಜಿಕ ಲೆಕ್ಕ ಪರಿಶೋಧನಾ ವರದಿಗಳಲ್ಲಿನ ಆಕ್ಷೇಪಣೆ ಸರಿಪಡಿಸಲು ಪರಿಹರಿಸಿಕೊಳ್ಳಲು ಸಂಬಂಧಿಸಿದ ಪಿಡಿಒ ಹಾಗೂ ಪಂಚಾಯತಿ ಸಿಬ್ಬಂದಿಗೆ ತಿಳಿಸಿದರು

ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ (ಗ್ರಾಉ) ಕಿರಾಣಬಾಬು, ಸಹಾಯಕ ಲೆಕ್ಕಧಿಕಾರಿ ಶರಣಬಸವ, ಪಿಡಿಒಗಳು, ಟಿಸಿ ರವೀಂದ್ರ ದೇಸಾಯಿ, ಟಿಐಇಸಿ ದುರ್ಗೇಶ, ಟಿಎಇ, ಟಿಎಎ, ಸೋಷಿಯಲ್ ಕೋ ಆರ್ಡಿನೆಟರ್ ಸಿದ್ದಲಿಂಗರಡ್ಡಿ, ತಾಂತ್ರಿಕ ಸಹಾಯಕ ಅಮರಯ್ಯ ಸ್ವಾಮಿ, ರಫೀಕ, ಜಿಕೆಎಮ್ ಚಂದ್ರಕಲಾ ಬಿಲ್ ಕಲೆಕ್ಟರ ಹಾಗೂ ತಾಪಂ, ಗ್ರಾಪಂ ಸಿಬ್ಬಂದಿ ಸೇರಿದಂತೆ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-30-1361240965

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.