ಯಾದಗಿರಿ: ‘ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶದ ರೈತರ ಕೃಷಿ ಚಟುವಟಿ ಕಡಿಮೆಯಾಗಿ ಕೃಷಿ ಕೂಲಿಕಾರರಿಗೆ ಕೆಲಸ ಸಿಗದೆ ತಮ್ಮ ಕುಟುಂಬ ನಿರ್ವಹಣೆ ಮಾಡಲು ಕೂಲಿ ಕೆಲಸಕ್ಕಾಗಿ ದೂರದ ನಗರಗಳಿಗೆ ವಲಸೆ ಹೋಗುವುದನ್ನು ತಡೆಯಲು ಪ್ರತಿ ಗ್ರಾಮ ಪಂಚಾಯಿತಿಗೆ ನೀಡಿದ ಗುರಿಗೆ ಅನುಸಾರ ಕೂಲಿಕಾರರಿಗೆ ಕೆಲಸ ಕೊಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಸಿ.ಬಿ. ದೇವರಮನಿ ಅವರು ಪಿಡಿಒಗಳಿಗೆ ಸೂಚಿಸಿದರು.

ತಾಲ್ಲೂಕಿನ ಮುಂಡರಗಿ, ರಾಮಸಮುದ್ರ ಗ್ರಾಮಗಳಿಗೆ ಶುಕ್ರವಾರ ಭೇಟಿ ನೀಡಿ, ನರೇಗಾ ಯೋಜನೆಯಡಿ ಪ್ರಗತಿಯಲ್ಲಿದ್ದ ನಾಲಾ ಹೂಳೆತ್ತುವ ಕಾಮಗಾರಿ ಪರಿಶೀಲಿಸಿ, ಕಾಮಗಾರಿ ಪ್ರಗತಿ, ಗುಣಮಟ್ಟ ಹಾಗೂ ಭೌತಿಕ ಸ್ಥಿತಿ ವೀಕ್ಷಿಸಿ, ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದ ಕೂಲಿಕಾರ್ಮಿಕರ ಸಮಸ್ಯೆಗಳನ್ನು ಆಲಿಸಿ ಅವರು ಮಾತನಾಡಿದರು.

‘ಗ್ರಾಮ ಪಂಚಾಯಿತಿಗಳಲ್ಲಿ ಹಿಂದಿನ ವರ್ಷದಲ್ಲಿ ನರೇಗಾ ಯೋಜನೆಯಡಿ ಅನುಷ್ಠಾನಗೊಳಿಸಿ ಅಪೂರ್ಣ ಮಾಡಿದ ಕಾಮಗಾರಿಗಳಲ್ಲಿ ಬಾಕಿ ಉಳಿದ ಕೂಲಿ ಹಣಕ್ಕೆ ಲೆಕ್ಕ ಹಾಕಿ ಕಾರ್ಮಿಕರಿಗೆ ಕೆಲಸ ಕೂಡಬೇಕು. ನರೇಗಾ ಯೋಜನೆಯಡಿ ಕೆಲಸ ಇಲ್ಲ ಎನ್ನಬಾರದು. ಕೆಲಸಕ್ಕಾಗಿ ಬೇಡಿಕೆ ಸಲ್ಲಿಸುವ ಕೂಲಿ ಕಾರ್ಮಿಕರಿಗೆ ಕೆಲಸ ಕೊಡಬೇಕು’ ಎಂದು ಸೂಚಿಸಿದರು.

‘ಗ್ರಾಮೀಣ ಪ್ರದೇಶದ ದುಡಿಯುವ ಕೈಗಳಿಗೆ ಕೂಲಿ ಕೆಲಸ ಕೊಡುವುದರ ಜತೆಗೆ ನೈಸರ್ಗಿಕ ಸಂಪನ್ಮೂಲ ರಕ್ಷಿಸುವ ಹಾಗೂ ಬಹುಕಾಲ ಬಾಳಿಕೆ ಬರುವ ಗ್ರಾಮೀಣ ಆಸ್ತಿ ಸೃಜನೆ ಮಾಡುವುದು ನರೇಗಾ ಯೋಜನೆಯ ಉದ್ದೇಶವಾಗಿದೆ’ ಎಂದರು.

‘ನರೇಗಾ ಯೋಜನೆಯಡಿ ಕೆಲಸ ಮಾಡಿದ ಕೂಲಿಕಾರರ ದಿನದ ಕೂಲಿ ಹಣ ನೇರವಾಗಿ ಅವರ ಆಧಾರ್ ಸಂಖ್ಯೆ ಲಿಂಕ್ ಮಾಡಿದ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ. ಜಾಬ್ ಕಾರ್ಡ್ ಪಡೆದ ಪ್ರತಿಯೊಬ್ಬ ಫಲಾನುಭವಿಗಳು ತಪ್ಪದೇ ತಮ್ಮ ಜಾಬ್ ಕಾರ್ಡ್ಗೆ ಇ-ಕೆವೈಸಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ’ ಎಂದು ಹೇಳಿದರು.

ಮುಂಡರಗಿ, ರಾಮಸಮುದ್ರ ಪಿಡಿಒಗಳು, ಜಿಲ್ಲಾ ಪಂಚಾಯಿತಿ ನರೇಗಾ ಯೋಜನೆ ಎಡಿಪಿಸಿ ಬನ್ನಪ್ಪ ಬೈಟಪುಲ್ಲಿ, ಜಿಲ್ಲಾ ಐಇಸಿ ಸಂಯೋಜಕ ಪರಶುರಾಮ ಜಿನಕೇರಾ, ಗ್ರಾಮ ಪಂಚಾಯಿತಿ ಸಿಬ್ಬಂದಿ, ಕಾಯಕ ಬಂಧುಗಳು, ನರೇಗಾ ಕೂಲಿಕಾರ್ಮಿಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-30-2022233552

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.