ಯಾದಗಿರಿ: ಯಾದಗಿರಿ ಜಿಲ್ಲಾಧಿಕಾರಿಯನ್ನಾಗಿ 2016ನೇ ವೃಂದದ ಐಎಎಸ್ ಅಧಿಕಾರಿ ರಾಹುಲ್ ಪಾಂಡ್ವೆ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.

ರಾಹುಲ್ ಪಾಂಡ್ವೆ ಅವರು ಪ್ರಸ್ತುತ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಲಬುರಗಿ ವಿಭಾಗದ ಹೆಚ್ಚುವರಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದಕ್ಕೂ ಮುನ್ನ ರಾಯಚೂರು ಜಿಲ್ಲಾ ಪಂಚಾಯಿತಿ ಸಿಇಒ, ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯ(ಜೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದರು.

ಪ್ರಸ್ತುತ ಜಿಲ್ಲಾಧಿಕಾರಿಯಾಗಿರುವ ಹರ್ಷಲ್ ಭೋಯರ್ ಅವರನ್ನು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ (ಇಡಿಸಿಎಸ್) ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. 2016ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಹರ್ಷಲ್ ಅವರು, 2025ರ ಜುಲೈ 9ರಂದು ಯಾದಗಿರಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ವರ್ಷ ಪೂರೈಸುವ ಮುನ್ನವೇ ವರ್ಗಾವಣೆಯಾಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-30-1205063304

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.