ವಡಗೇರಾ: ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಾಬ್ ಕಾರ್ಡ್ ಹೊಂದಿರುವ ಪ್ರತಿ ಕುಟುಂಬವು ಮೇ ತಿಂಗಳ ಅಂತ್ಯದ ಒಳಗೆ, ಜಾಬ್ ಕಾರ್ಡ್ಗಳನ್ನು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಸಿ.ಬಿ. ದೇವರಮನಿ ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಈಚೆಗೆ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಸಿ.ಬಿ ದೇವರಮನಿ ರವರ ಅಧ್ಯಕ್ಷತೆಯಲ್ಲಿ ನಡೆದ ನರೇಗಾ ಸಿಬ್ಬಂದಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ತಾಲ್ಲೂಕಿನ 17 ಗ್ರಾಪಂಯ ಗ್ರಾಪಂ ಸಿಬ್ಬಂದಿ, ಅಧಿಕಾರಿಗಳು, ಗ್ರಾಮದ ಕೂಲಿ ಕಾರ್ಮಿಕರ ಮನೆ ಮನೆಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಬೇಕು ಹಾಗೆಯೆ ಪ್ರತಿ ಗ್ರಾಪಂಗಳಿಗೆ ನಿಗದಿಪಡಿಸಿದ ಮಾನವ ದಿನಗಳ ಗುರಿಯನ್ನು ಸಾಧಿಸಬೇಕು. ಯಾವುದೇ ಕಾರಣಕ್ಕೂ ಉದಾಸಿನತೆಯನ್ನು ಸಹಿಸುವುದಿಲ್ಲ’ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಿಬ್ಬಂದಿ ಕಾರ್ಮಿಕರಿಂದ ಕೂಲಿ ಬೇಡಿಕೆ ಪಡೆದು, ನಿರಂತರ ಕೂಲಿ ಕೆಲಸ ಒದಗಿಸುವುದು, ನರೇಗಾ ಯೋಜನೆಯಡಿ ಕೆಲಸ ಮಾಡುವ ಪ್ರತಿಯೊಬ್ಬ ಗಂಡು-ಹೆಣ್ಣಿಗೆ ಸಮಾನ ಕೆಲಸಕ್ಕೆ ಸಮಾನ ಕೂಲಿ, ದಿನಕ್ಕೆ ಒಬ್ಬರಿಗೆ ₹370 ಕೂಲಿ ಮೊತ್ತ ನೀಡಲಾಗುತ್ತಿದ್ದು, ಯೋಜನೆ ಬಗ್ಗೆ ಗ್ರಾಮೀಣ ಭಾಗದಲ್ಲಿ ಅರಿವು ಮೂಡಿಸಬೇಕು’ ಎಂದು ಗ್ರಾಪಂ ಸಿಬ್ಬಂದಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ಕಿರಾಣಬಾಬು, ಡಿಎಂಐಎಸ್ ರಾಘವೇಂದ್ರ, ಡಿಐಇಸಿ ಪರಶುರಾಮ, ಟಿಸಿ ರವೀಂದ್ರ ದೇಸಾಯಿ, ಟಿಎಂಐಎಸ್ ಮಲ್ಲಿಕಾರ್ಜುನ ನರೇಗಾ ಅಡ್ಮೀನ್ ದೇವಮ್ಮ ಹಾಗೂ ಟಿಐಇಸಿ ದುರ್ಗೇಶ, ಡಿಇಒ ಗಳು, ಟಿಎಎ ಮತ್ತು ಜಿಕೆಎಂಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-30-193840950

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.