ವಡಗೇರಾ: ‘ಕಂದಾಯ ಇಲಾಖೆಯ ಸಿಬ್ಬಂದಿ ಸರಿಯಾದ ಸಮಯಕ್ಕೆ ಕಚೇರಿಗೆ ಹಾಜರಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಜನ ಸಾಮಾನ್ಯರಿಗೆ ಜನಸ್ನೇಹಿ ಸೇವೆ ಒದಗಿಸಬೇಕು’ ಎಂದು ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಗೆ ಗುರುವಾರ ಭೇಟಿ ನೀಡಿ ಜನಗಣತಿಯ ಕಾರ್ಯ ಹಾಗೂ ಬಾಕಿ ಇರುವ ಅರ್ಜಿಗಳ ಪರಿಶೀಲನೆ ನಡೆಸಿದ ನಂತರ ಅವರು ಮಾತನಾಡಿದರು.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜನಗಣತಿ ಕಾರ್ಯವನ್ನು ಪಾರದರ್ಶಕವಾಗಿ ನಡೆಸುವಂತೆ ತಹಶೀಲ್ದಾರ್ ಮತ್ತು ಸಿಬ್ಬಂದಿಗೆ ಸೂಚಿಸುವುದರ ಜತೆಗೆ ಜನಗಣತಿಗಾಗಿ ಜಿಲ್ಲಾಡಳಿತ ನೇಮಿಸಿದ ಸಿಬ್ಬಂದಿ ಕಡ್ಡಾಯವಾಗಿ ಜನಗಣತಿ ಕಾರ್ಯದಲ್ಲಿ ಹಾಜರಾಗಿ ಯಶಸ್ವಿಗೊಳಿಸಬೇಕು ಎಂದರು.

‘ಸಾರ್ವಜನಿಕರ ಹಾಗೂ ರೈತರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಿ ಬಾಕಿ ಇರುವ ಕಡತಗಳ ವಿಲೇವಾರಿಗಳನ್ನು ಶೀಘ್ರವೇ ಮಾಡಬೇಕು. ಯಾವುದೆ ಕಾರಣಕ್ಕೂ ವಿಳಂಬ ದೊರಣೆಯನ್ನು ಸಹಿಸುವುದಿಲ್ಲ’ ಎಂದರು.

ತಹಶೀಲ್ ಕಚೇರಿಯಲ್ಲಿ ಸ್ವಚ್ಛತೆ ಕಾಪಾಡಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಇನ್ನಿತರ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ತಹಶೀಲ್ದಾರ್ ಅವರಿಗೆ ಸೂಚಿಸಿದರು. ತಹಶೀಲ್ದಾರ್ ಮಂಗಳಾ. ಎಂ, ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-30-1717320795

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.