ಶನಿವಾರ, ಜುಲೈ 31, 2021
25 °C
ಜಿಲ್ಲೆಯಾದ್ಯಂತ ಕಠಿಣ ಲಾಕ್ ಡೌನ್ ಜಾರಿ: ಜಿಲ್ಲಾಧಿಕಾರಿ ಕೂರ್ಮಾರಾವ್‌

ಒಂದು ವಾರ ಲಾಕ್‌ಡೌನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಜುಲೈ 15 ಮಧ್ಯರಾತ್ರಿಯಿಂದ ಜುಲೈ 22ರ ವರೆಗೆ ಜಿಲ್ಲೆಯಲ್ಲಿ ಲಾಕ್‌ಡೌನ್ ಜಾರಿಯಾಗಲಿದೆ. 

ಬೆಳಿಗ್ಗೆ 5 ರಿಂದ ಮಧ್ಯಾಹ್ನ 1 ರವರೆಗೆ ದಿನಸಿ, ಹಾಲು, ಹಣ್ಣು ಹಂಪಲು, ತರಕಾರಿ, ಪೆಟ್ರೋಲ್ ಪಂಪ್ ಹಾಗೂ ಅವಶ್ಯಕ ಇನ್ನಿತರ ಅಂಗಡಿಗಳು ಮಾತ್ರ ತೆರೆದಿರುತ್ತವೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ಕೊರೊನಾ ವೈರಸ್ ಸೋಂಕಿನಿಂದಾಗಿ ಇಲ್ಲಿಯವರೆಗೆ 1,452 ಜನರಿಗೆ ಪಾಸಿಟಿವ್ ಸೋಂಕಿನ ಪ್ರಕರಣಗಳು ದೃಢಪಟ್ಟಿರುವುದರಿಂದ ಸಂಭವಿಸಿಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಲಾಕ್‌ಡೌನ್ ಜಾರಿಯಲ್ಲಿರುತ್ತದೆ ಎಂದು ಆದೇಶಿಸಲಾಗಿದೆ.

ಈ ನಿಷೇಧಾಜ್ಞೆ ಅವಧಿಯಲ್ಲಿ ಜಿಲ್ಲೆಯಾದ್ಯಂತ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ದಿನಬಳಕೆ, ದಿನಸಿ, ತರಕಾರಿ, ಹಾಲು, ಹಣ್ಣು ಹಂಪಲುಗಳು, ಪೆಟ್ರೋಲ್ ಬ್ಯಾಂಕುಗಳು ಅತ್ಯವಶ್ಯಕ ಇನ್ನಿತರ ಅಂಗಡಿಗಳು ಮಾತ್ರ ತೆರೆದಿರುತ್ತವೆ. ಕೃಷಿ ಹಾಗೂ ತೋಟಗಾರಿಕೆ ಸಂಬಂಧಿಸಿದ ಎಲ್ಲಾ ಚಟುವಟಿಕೆ ಬೇಕಾಗುವ ಕೀಟನಾಶಕಗಳು ಯಂತ್ರೋಪಕರಣಗಳ ಅವಶ್ಯಕವಿರುವ ಅಂಗಡಿಗಳು ಜಿಲ್ಲೆಯಾದ್ಯಂತ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ತೆರೆದಿರುತ್ತವೆ ಎಂದು ತಿಳಿಸಿದ್ದಾರೆ. 

ಬ್ಯಾಂಕ್‌ಗಳು, ಪೋಸ್ಟ್ ಆಫೀಸ್ ಇನ್ನಿತರ ಕಚೇರಿ ಮಾತ್ರ ತೆರೆದಿರುತ್ತವೆ. ಯಾವುದೇ ಸಭೆ, ಸಮಾರಂಭ, ಜಾತ್ರೆ, ಧಾರ್ಮಿಕ, ಸಾಮಾಜಿಕ ಗುಂಪು ಸೇರುವುದನ್ನು ನಿರ್ಬಂಧಿಸಲಾಗುತ್ತದೆ. ಜಿಲ್ಲೆಯಾದ್ಯಾಂತ ಬಾರ್ ಮತ್ತು ರೆಸ್ಟೋರೆಂಟ್ಸ್, ಲಿಕ್ಕರ್ ಲೆಟ್ಸ್, ಹೋಟೆಲ್, ಬಟ್ಟೆ ಅಂಗಡಿಗಳು, ಬಂಗಾರದ ಅಂಗಡಿಗಳು, ಖಾನಾವಳಿಗಳು (ಪಾರ್ಸಲ್ ಮತ್ತು ಹೋಂ ಡೆಲೆವರಿ ಹೊರತುಪಡಿಸಿ) ಇನ್ನಿತರೆ ಎಲ್ಲಾ ತರಹದ ಅಂಗಡಿ ಮುಂಗಟ್ಟುಗಳು ತೆರೆಯುವುದನ್ನು ನಿಷೇಧಿಸಲಾಗಿದೆ.

ರಾಜ್ಯದಲ್ಲಿ ಕರೋನಾ ರೋಗಾಣು ಅರಡುವ ಸರ್ಕಾರವು ತುರ್ತು ಪರಿಸ್ಥಿತಿಘೋಷಿಸಿದೆ. ಜಿಲ್ಲೆಯ ನೆರೆ ಜಿಲ್ಲೆಗಳಲ್ಲಿ ಕೋವೀಡ್ -19 ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚೆಳವಾಗುತ್ತಿರುವುದರಿಂದ ನೆರೆ ಜಿಲ್ಲೆಗಳಿಂದ ಹಾಗೂ ರಾಜ್ಯಗಳಿಂದ ಜಿಲ್ಲೆಗೆ ಪ್ರಯಾಣಿಕರ ಓಡಾಟದಿಂದಾಗಿ ವ್ಯಕ್ತಿಯಿಂದ ವ್ಯಕ್ತಿಗೆ ಈ ಸಾಂಕ್ರಾಮಿಕ ರೋಗವು ಹರಡುವ ಸಾಧ್ಯತೆ ಇರುವುದರಿಂದ ಜಿಲ್ಲೆಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟಲು ಸಾರ್ವಜನಿಕರ ಹಿತಾದೃಷ್ಟಿಯಿಂದ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಕಂಡು ಬಂದಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕ ಸ್ಥಳ, ಅಂಗಡಿಗಳಲ್ಲಿ ಒಂದು ಮೀಟರ್ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ. ಅಲ್ಲದೇ ಸಾರ್ವಜನಿಕ ಸ್ಥಳ, ಅಂಗಡಿಗಳಲ್ಲಿ ಸ್ಯಾನಿಟೈಸರ್ ಕಡ್ಡಾಯ ಉಪಯೋಗಿಸಬೇಕು ಎಂದು ತಿಳಿಸಿದ್ದಾರೆ. ಇನ್ನು ಸಾರ್ವಜನಿಕ ಸೇವೆ ಹೊರತುಪಡಿಸಿ ಅನಗತ್ಯವಾಗಿ ಮನೆಯಿಂದ ಹೊರ ಬರುವ ವ್ಯಕ್ತಿಗಳ ವಿರುದ್ಧ ಕಾನೂನಿನ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

***

ಜಿಲ್ಲೆಯ ಜನರು ಆರೋಗ್ಯ ಸೇತು ಆ್ಯಪ್‌ ಡೌನ್‌ ಲೋಡ್‌ ಮಾಡಿಕೊಳ್ಳಬೇಕು. ಕಡ್ಡಾಯವಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು

ಎಂ.ಕೂರ್ಮಾರಾವ್, ಜಿಲ್ಲಾಧಿಕಾರಿ 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.