ಹುಣಸಗಿ: ಯಾದಗಿರಿ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರದಲ್ಲಿ ಭತ್ತದ ಖರೀದಿ ಕೇಂದ್ರ ಪ್ರಾರಂಭ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲ್ಲೂಕು ಘಟಕದಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲನಗೌಡ ನಗನೂರ ಮಾತನಾಡಿ, ‘ಈ ಹಿಂದೆ ಭತ್ತ ಖರೀದಿ ಮಾಡಿರುವ ದಲ್ಲಾಳಿಗಳು 75 ಕೆ.ಜಿ ಗೆ 2 ಕೆ.ಜಿ. ಸೂಟ್ ತೆಗೆದುಕೊಳ್ಳುತ್ತಿದ್ದಾರೆ ಎಂಬ ಆರೋಪವಿದೆ. ಆದ್ದರಿಂದ ಭತ್ತ ಖರೀದಿ ಮಾಡುವ ದಲ್ಲಾಳಿಗಳನ್ನು ಹಾಗೂ ವರ್ತಕರನ್ನು ಕರೆಸಿ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಬೇಕು. ಹಾಗೂ ಶೀಘ್ರವೇ ಯಾದಗಿರಿ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಭತ್ತ ಖರೀದಿ ಕೇಂದ್ರ ಆರಂಭಿಸುವ ಮೂಲಕ ರೈತರ ಹಿತ ಕಾಪಾಡಬೇಕು’ ಎಂದು ಒತ್ತಾಯಿಸಿದರು.

ಹುಣಸಗಿ ತಹಶೀಲ್ದಾರ್ ಎಂ.ಬಸವರಾಜ ಮನವಿ ಪತ್ರ ಸ್ವೀಕರಿಸಿ, ‘ಭತ್ತದ ತೂಕ ಹಾಗೂ ಕಟಾವು ಮಾಡುವ ಯಂತ್ರದ ಬಾಡಿಗೆ ಹೆಚ್ಚಿನ ದರ ವಸೂಲಿ ಮಾಡಿದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವದು’ ಎಂದುತಿಳಿಸಿದರು.

ಈ ಸಂದರ್ಭದಲ್ಲಿ ನಾಗರೆಡ್ಡಿ ನಾವದಗಿ, ಮೈಬೂಬಸಾಬ ಚೌದ್ರಿ, ರಸೂಲ ಚೌದ್ರಿ, ಐಮದ್ ಮುಲ್ಲಾ ಸೇರಿದಂತೆ ಇನ್ನಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-30-1656446788

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.