ವಡಗೇರಾ: ‘ರಾಜ್ಯ ಸರ್ಕಾರವು ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳನ್ನು ಪ್ರಾಮಾಣಿಕವಾಗಿ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು’ ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಖಾಜಾ ಮೈನೋದ್ದೀನ್ ಮಿರ್ಚಿ ಹೇಳಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಶುಕ್ರವಾರ ಪಂಚ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಪಂಚ ಗ್ಯಾರಂಟಿಗಳನ್ನು ರಾಜ್ಯ ಸರ್ಕಾರವು ದಿನದಲಿತರಿಗಾಗಿ ಹಾಗೂ ಹಿಂದುಳಿದವರಿಗಾಗಿ ಜಾರಿಗೆ ತಂದಿದೆ ಈ ಯೋಜನೆಗಳು ಯಶಸ್ವಿಯಾಗಬೇಕಾದರೆ ಗ್ಯಾರಂಟಿ ಯೋಜನೆಯ ಸದಸ್ಯರು ಒಗ್ಗಟ್ಟಿನಿಂದ ಕಾರ್ಯವನ್ನು ನಿರ್ವಹಿಸಬೇಕು ಆಗ ಮಾತ್ರ ಸಮಿತಿಗೂ ಹಾಗೂ ಸರ್ಕಾರಕ್ಕೂ ಗೌರವ ಸಿಗುತ್ತದೆ’ ಎಂದು ಹೇಳಿದರು.

ಸಭೆಯಲ್ಲಿ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಹಿರೇಮಠ, ಸದಸ್ಯರಾದ ಸೋಮನಾಥ ಗೌಡ, ಮೈನೋದ್ದೀನ್ ದೇವದುರ್ಗ, ಶಂಕ್ರಯ್ಯ ಸ್ವಾಮಿ, ಜಲಾಲ್ ಪಟೇಲ್, ಸಿದ್ದಲಿಂಗ, ಹಾಗೂ ತಾಲ್ಲೂಕು ಅನುಷ್ಠಾನ ಅಧಿಕಾರಿಗಳು ಹಾಗೂ ತಾಪಂ ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-30-1446052820

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.