ಯಾದಗಿರಿ: ಪೋಕ್ಸೊ ಪ್ರಕರಣ ಆರೋಪಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕಿನ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ಅವರ ವಿರುದ್ಧದ ತನಿಖೆಯ ತಡೆಯಾಜ್ಞೆಯನ್ನು ಕಲಬುರಗಿ ಹೈಕೋರ್ಟ್ ತೆರವುಗೊಳಿಸಿ, ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ತಮ್ಮ ವಿರುದ್ಧದ ಪೋಕ್ಸೊ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಕಳೆದ ತಿಂಗಳು ಮಲ್ಲಿಕಾರ್ಜುನ ಮುತ್ಯಾ ಅರ್ಜಿ ಸಲ್ಲಿಸಿದ್ದರು. ಆದರೆ, ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಲಾಗಿತ್ತು. ತಡೆಯಾಜ್ಞೆಯನ್ನು ತೆರವು ಮಾಡುವಂತೆ ಕೋರಿ ಸರ್ಕಾರ ಅರ್ಜಿ ಸಲ್ಲಿಕೆ ಮಾಡಿತ್ತು.

ಕಲಬುರಗಿ ಹೈಕೋರ್ಟ್ ಪೀಠದ ಏಕಸದಸ್ಯ ಪೀಠ ನ್ಯಾಯಮೂರ್ತಿ ಜಿ. ಬಸವರಾಜ ಅವರು ಅರ್ಜಿಯ ವಿಚಾರಣೆ ನಡೆಸಿ, ತನಿಖೆಯ ತಡೆಯಾಜ್ಞೆಯನ್ನು ತೆರವು ಮಾಡಿದ್ದಾರೆ. ಅರ್ಜಿದಾರ ಆರೋಪಿಗೆ ₹ 1 ಲಕ್ಷ ಸ್ವಯಂ ಬಾಂಡ್ನೊಂದಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಸಹ ಮಂಜೂರು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆರೋಪಿಯು ಪೊಲೀಸ್ ಅಧಿಕಾರಿ ವಿಚಾರಣೆಗೆ ಕರೆದಾಗ ಹಾಜರಾಗಬೇಕು. ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ವ್ಯಕ್ತಿಯ ಮೇಲೆ ನೇರವಾಗಿ ಅಥವಾ ಪರೋಕ್ಷವಾಗಿ ಪ್ರಭಾವ ಬೀರಬಾರದು. ದೇಶವನ್ನು ಬಿಟ್ಟು ತೆರಳದಂತೆಯೂ ಪೀಠವು ತಾಕೀತು ಮಾಡಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-34-242930962

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.