ಯಾದಗಿರಿ: ಜಿಲ್ಲೆಯ ಸರ್ವಾಂಗೀಣ ಪ್ರಗತಿ, ಆಡಳಿತಾತ್ಮಕ ನಿರಂತರತೆ ಹಾಗೂ ಜನಪರ ಯೋಜನೆಗಳ ಅನುಷ್ಠಾನಕ್ಕೆ ಸಚಿವ ಶರಣಬಸಪ್ಪ ದರ್ಶನಾಪುರ ಅವರ ನಾಯಕತ್ವ ಅಗತ್ಯವಿದ್ದು, ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ವಕ್ತಾರ ಸ್ಯಾಮ್ಸನ್ ಮಾಳಿಕೇರಿ ಕೋರಿದ್ದಾರೆ.

ದರ್ಶನಾಪುರ ಅವರಿಗೆ ಜಿಲ್ಲೆಯ ಸಾಮಾಜಿಕ, ಆರ್ಥಿಕ ಮತ್ತು ಆಡಳಿತಾತ್ಮಕ ವ್ಯವಸ್ಥೆಯ ಕುರಿತು ಆಳವಾದ ಅರಿವಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ. ಶಿಕ್ಷಣ, ಆರೋಗ್ಯ, ಕೃಷಿ, ನೀರಾವರಿ, ಕುಡಿಯುವ ನೀರು, ಕೈಗಾರಿಕೆ, ರಸ್ತೆ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಬೇಕಾದ ಅವಶ್ಯಕತೆ ಇದೆ. ಹೀಗಾಗಿ, ಅವರನ್ನು ಉಸ್ತುವಾರಿ ಸಚಿವರಾಗಿ ಮಾಡಬೇಕು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-30-1938477491

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.