ಯಾದಗಿರಿ: ‘ಕಲ್ಯಾಣ ಕರ್ನಾಟಕಕ್ಕೆ ಶುದ್ಧವಾದ ಕುಡಿಯುವ ನೀರು ಕೊಡಲಾಗದ ಪ್ರಚಾರ ಮಂತ್ರಿ ಪ್ರಿಯಾಂಕ್ ಖರ್ಗೆ ಅವರೇ ನಿಮ್ಮ ಅಂಕಿಅಂಶಗಳ ವೈಫಲ್ಯಕ್ಕೆ ಉತ್ತರವಿದೆಯಾ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದ್ದಾರೆ.

‘ಕಲ್ಯಾಣ ಕರ್ನಾಟಕದ ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಅವರು ಅಭಿವೃದ್ಧಿಯ ದೊಡ್ಡ ಭಾಷಣಗಳನ್ನು ಮಾಡುತ್ತಾ, ಸಾಮಾಜಿಕ ಜಾಲತಾಣಗಳಲ್ಲಿ ಫ್ಯಾಕ್ಟ್ ಚೆಕ್ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರದೇ ಇಲಾಖೆಯ ಅಂಕಿಅಂಶಗಳು ಆಡಳಿತದ ಭೀಕರ ವೈಫಲ್ಯವನ್ನು ಬಹಿರಂಗಪಡಿಸುತ್ತಿವೆ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

‘ಕಲ್ಯಾಣ ಕರ್ನಾಟಕದಲ್ಲಿ 3,965 ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ಗ್ರಾಮ ಪಂಚಾಯಿತಿ ಅಧೀನದಲ್ಲಿ 2,987 ಘಟಕಗಳಿದ್ದು, ಅವುಗಳಲ್ಲಿ 1,708 ಕಾರ್ಯನಿರ್ವಹಿಸುತ್ತಿವೆ. ಶೇ.43ರಷ್ಟು ಘಟಕಗಳು ಸ್ಥಗಿತಗೊಂಡು ದೂಳು ಹಿಡಿಯುತ್ತಿವೆ. ಮೂರು ವರ್ಷಗಳಲ್ಲಿ ಘಟಕಗಳ ನಿರ್ವಹಣೆ ಮತ್ತು ದುರಸ್ತಿ ಹೆಸರಿನಲ್ಲಿ ₹17 ಕೋಟಿಗೂ ಹೆಚ್ಚು ಹಣ ಖರ್ಚಾಗಿದೆ’ ಎಂದು ಸದನದಲ್ಲಿ ನೀಡಿದ ಅಂಕಿಅಂಶಗಳನ್ನು ಉಲ್ಲೇಖಿಸಿದ್ದಾರೆ.

‘ಕಲಬುರಗಿಯಲ್ಲಿನ 510 ಘಟಕಗಳಲ್ಲಿ ಕೇವಲ 132 ಕಾರ್ಯನಿರ್ವಹಿಸುತ್ತಿದ್ದು, ಶೇ 75ರಷ್ಟು ಘಟಕಗಳು ಸ್ಥಗಿತವಾಗಿವೆ. ಸ್ವಂತ ಜಿಲ್ಲೆಯಲ್ಲೇ ವೈಫಲ್ಯವಿಟ್ಟುಕೊಂಡು ರಾಜ್ಯದ ಅಭಿವೃದ್ಧಿಯ ಬಗ್ಗೆ ದೊಡ್ಡ ಭಾಷಣ ಮಾಡುವುದು ರಾಜಕೀಯ ದುರಹಂಕಾರದ ಪರಮಾವಧಿ’ ಎಂದು ಟೀಕಿಸಿದ್ದಾರೆ.

‘ಸಚಿವರ ಸಂಪೂರ್ಣ ಗಮನ ಆರ್ಎಸ್ಎಸ್, ಬಿಜೆಪಿ ನಾಯಕರ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಫ್ಯಾಕ್ಟ್ ಚೆಕ್ ಮಾಡುವುದರಲ್ಲೇ ಮುಳುಗಿದೆ. ಅವರು ಗ್ರಾಮೀಣಾಭಿವೃದ್ಧಿ ಸಚಿವರಿಗಿಂತ ಕಾಂಗ್ರೆಸ್ ಸರ್ಕಾರದ ಪ್ರಚಾರ ಮಂತ್ರಿಯಾಗಿ ಹೆಚ್ಚು ಕೆಲಸ ಮಾಡುತ್ತಿರುವುದು ಸ್ಪಷ್ಟವಾಗಿದೆ’ ಎಂದು ವ್ಯಂಗ್ಯವಾಡಿದ್ದಾರೆ.

‘ಬೇರೆಯವರ ತಟ್ಟೆಯಲ್ಲಿ ಏನಿದೆ ಎಂದು ಇಣುಕಿ ನೋಡುವ ಮುನ್ನ, ತಮ್ಮ ಇಲಾಖೆಯ ತಟ್ಟೆಯಲ್ಲಿರುವ ಕೊಳೆಯನ್ನು ಮೊದಲು ಸ್ವಚ್ಛಗೊಳಿಸಬೇಕು. ನಿಮ್ಮ ಇಲಾಖೆಯ ವೈಫಲ್ಯದ ಬಗ್ಗೆ ಯಾರು ಫ್ಯಾಕ್ಟ್ ಚೆಕ್ ಮಾಡಬೇಕು? ನಿಮ್ಮದೇ ಜಿಲ್ಲೆಯ ಜನರಿಗೆ ಕುಡಿಯುವ ನೀರು ಕೊಡಲಾಗದೆ, ರಾಜ್ಯದ ಅಭಿವೃದ್ಧಿಯ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದವಾಗಿದೆ’ ಎಂದಿದ್ದಾರೆ.

‘ಆರ್ಎಸ್ಎಸ್ ಮತ್ತು ವಿರೋಧ ಪಕ್ಷದವರನ್ನು ಟೀಕಿಸಲು ಬಳಸುವ ನಿಮ್ಮ ಸಮಯದ ಅರ್ಧದಷ್ಟನ್ನಾದರೂ ಜನರ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಬಳಸಿದ್ದರೆ, ಇಂದು ಕಲ್ಯಾಣ ಕರ್ನಾಟಕದ ಜನ ಹನಿ ನೀರಿಗಾಗಿ ಬೀದಿಗಿಳಿಯುವ ಪರಿಸ್ಥಿತಿ ಬರುತ್ತಿರಲಿಲ್ಲ’ ಎಂದು ನಾರಾಯಣಸ್ವಾಮಿ ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-30-1237610120

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.