ಯಾದಗಿರಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್ಐಆರ್) ವಿರೋಧಿಸಿ ಮೇ 30ರಂದು ಪ್ರತಿಭಟನೆ ನಡೆಸಲು ಎಸ್ಐಆರ್ ವಿರೋಧಿ ಪ್ರಗತಿಪರ ಸಂಘಟನೆಗಳು ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟದ ಮುಖಂಡರು ನಿರ್ಧರಿಸಿದ್ದಾರೆ.

ಎಸ್ಐಆರ್ ಕುರಿತು ಸಮಾಲೋಚನಾ ಸಭೆಯು ಈಚೆಗೆ ನಗರದ ಹಳೆ ಪ್ರವಾಸಿ ಮಂದಿರದಲ್ಲಿ ನಡೆಯಿತು. ಸಭೆಯಲ್ಲಿ ಸಾಹಿತಿಗಳು, ಚಿಂತಕರು, ಕಲಾವಿದರು, ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು, ಜಾತ್ಯತೀತ ಪಕ್ಷಗಳ ಕಾರ್ಯಕರ್ತರು ಭಾಗವಹಿಸಿದರು.

ಸಭೆಯಲ್ಲಿ ಭೀಮಣ್ಣ ಮೇಟಿ, ದಸಂಸ ಮುಖಂಡ ಮರೆಪ್ಪ ಚಟ್ಟೆಕರ್ ಮಾತನಾಡಿ, ‘ಎಸ್ಐಆರ್ ಎಂಬುದು ಅಸಂವಿಧಾನಿಕ, ಅವೈಜ್ಞಾನಿಕ, ದೋಷಪೂರಿತ ಹಾಗೂ ದುರುದ್ದೇಶಪೂರಿತ ಮತದಾರರ ಪಟ್ಟಿಯ ಪರಿಷ್ಕರಣಾ ಪ್ರಕ್ರಿಯೆಯಾಗಿದೆ. ಸಾಮಾನ್ಯ ಮತದಾರರ ಹಕ್ಕುಗಳನ್ನು ಕಸಿಯುವ ಪ್ರಯತ್ನ ನಡೆಯುತ್ತಿದೆ’ ಎಂದು ಆರೋಪಿಸಿದರು.

‘ಮತದಾರರ ಪಟ್ಟಿಯ ಪರಿಷ್ಕರಣೆ ಹೆಸರಿನಲ್ಲಿ ಬಡವರು, ಕಾರ್ಮಿಕರು, ಗ್ರಾಮೀಣ ಪ್ರದೇಶದ ಜನರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಮತದಾನದ ಹಕ್ಕುಗಳನ್ನು ದುರ್ಬಲಗೊಳಿಸುವ ಸಂಚು ನಡೆಯುತ್ತಿದೆ. ಸರ್ಕಾರ ಹಾಗೂ ಚುನಾವಣಾ ಆಯೋಗವು ಜನರಲ್ಲಿ ಗೊಂದಲ ಸೃಷ್ಟಿಸುವ ಬದಲು ಪಾರದರ್ಶಕ ಮತ್ತು ಸಂವಿಧಾನಬದ್ಧ ವಿಧಾನಗಳನ್ನು ಅನುಸರಿಸಬೇಕು’ ಎಂದು ಆಗ್ರಹಿಸಿದರು.

ಸಭೆಯಲ್ಲಿ ಮುಖಂಡರಾದ ತಂಜುಮನ್ ಬೈತುಲ್, ಗೋಪಾಲ ತೆಳಿಗೇರಿ, ಭೀಮರಾಯ ಹೊಸಮನಿ, ಸೈದಪ್ಪ ಕುಲೂರ್, ನಿಂಗಪ್ಪ ಕೊಲ್ಲೂರ್, ಫಕೀರ ವಡಿಗೇರಾ, ಹೊನ್ನಪ್ಪ ಪೂಜಾರಿ, ನಿಂಗಪ್ಪ ಮುರಡಿ, ಮಲ್ಲೇಶಿ ಅನಕಸೂಗೂರ, ಹಣಮಂತ ಗುರುಸುಣಿಗಿ, ವಾಹಿದ್ ಮಿಯಾ, ಇನಾಯತ್, ಮನ್ಸೂರ್ ಅಹ್ಮದ್, ವಾಸೆ, ಜಾಗೀರದಾರ, ಚಂದ್ರಮಪ್ಪ, ಸಾಬಣ್ಣ, ಶರಣಗೌಡ, ಆನಂದ್ ಭಜಂತ್ರಿ, ಮಹದೇವಪ್ಪ ಗುರುಸುಣಿಗಿ, ಮಲ್ಲಪ್ಪ ತಡಿಬಿಡಿ, ಸಿದ್ರಾಮಪ್ಪ ನಾಯ್ಕಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-30-757552661

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.