ಯಾದಗಿರಿ: ಯಾದಗಿರಿ ವಿಭಾಗದ ಹತ್ತಿಗೂಡೂರು–ತಿಂಥಣಿ ಸೇತುವೆ ಹಾಗೂ ರಾಯಚೂರಿನ ಲಿಂಗಸುಗೂರು ವಿಭಾಗದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-150ಎ ಕಾಮಗಾರಿಯನ್ನು ಕೇಂದ್ರ ಸರ್ಕಾರವು 2026-27ರ ವಾರ್ಷಿಕ ಯೋಜನೆಯಲ್ಲಿ ಸೇರ್ಪಡೆ ಮಾಡಿಕೊಂಡಿದೆ ಎಂದು ಸಂಸದ ಜಿ.ಕುಮಾರ್ ನಾಯಕ್ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ-150ಎ ವಿಸ್ತರಣೆ ಹಾಗೂ ಮರುನಿರ್ಮಾಣ ಕಾಮಗಾರಿಯನ್ನು ತುರ್ತಾಗಿ ಕೈಗೊಳ್ಳುವಂತೆ ಕೋರಿ ಸಂಸದರು ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ವಿ.ಉಮಾಶಂಕರ್ ಅವರಿಗೆ ಪತ್ರ ಬರೆದಿದ್ದರು.

ಎನ್ಎಚ್-150ಎ ಬೀದರ್, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳಲ್ಲಿ ಒಂದಾಗಿದೆ. ನಿತ್ಯ ಸಾವಿರಾರು ವಾಣಿಜ್ಯ ಹಾಗೂ ಸಾರ್ವಜನಿಕ ವಾಹನಗಳು ಈ ಮಾರ್ಗದಲ್ಲಿ ಸಂಚರಿಸುತ್ತಿವೆ ಎಂದಿದ್ದಾರೆ.

ಹತ್ತಿಗೂಡೂರು–ಲಿಂಗಸುಗೂರು ವಿಭಾಗದಲ್ಲಿನ ರಸ್ತೆ ಕೇವಲ 5.50 ಮೀಟರ್ ಅಗಲವನ್ನು ಹೊಂದಿದೆ. ಮಧ್ಯಮ ಅಗಲದ ರಸ್ತೆ ಆಗಿರುವುದರಿಂದ ವಾಹನ ಸವಾರರು ಹಾಗೂ ಪ್ರಯಾಣಿಕರು ಸಂಚಾರದ ವೇಳೆ ತೀವ್ರ ತೊಂದರೆ ಆಗುತ್ತಿದೆ. ರಸ್ತೆ ಅಗಲ ಕಡಿಮೆ ಇರುವುದರಿಂದ ನಿರಂತರವಾಗಿ ಗಂಭೀರ ಅಪಘಾತಗಳು ಸಂಭವಿಸುತ್ತಿವೆ. ಇದರಿಂದ ಜೀವಹಾನಿ ಉಂಟಾಗುತ್ತಿದೆ ಎಂದು ಹೇಳಿದ್ದಾರೆ.

ಸಂಸದರ ಮನವಿಗೆ ಹೆದ್ದಾರಿ ಪ್ರಾಧಿಕಾರವು ಸಕಾರಾತ್ಮಕವಾಗಿ ಸ್ಪಂದಿಸಿದೆ. ಎನ್ಎಚ್-150ಎ ಹಾದು ಹೋಗಿರುವ ಯಾದಗಿರಿ ಜಿಲ್ಲೆಯ ಹತ್ತಿಗೂಡೂರು–ತಿಂಥಣಿ ಸೇತುವೆ– ರಾಯಚೂರಿನ ಲಿಂಗಸುಗೂರು ವಿಭಾಗದಲ್ಲಿ ರಸ್ತೆಯ ಅಗಲೀಕರಣ, ಮರುನಿರ್ಮಾಣ ಕಾಮಗಾರಿಯನ್ನು 2026-27ನೇ ಸಾಲಿನ ವಾರ್ಷಿಕ ಯೋಜನೆಯಲ್ಲಿ ಸೇರಿಸಿಕೊಂಡಿದೆ. ಶೀಘ್ರದಲ್ಲೇ ಡಿಪಿಆರ್ ತಯಾರಿಸಿ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-30-1075418301

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.