ವಡಗೇರಾ: ‘ಮಳೆಗಾಲ ಆರಂಭಗೊಂಡಿದ್ದು ಗ್ರಾಮೀಣ ಭಾಗದಲ್ಲಿ ಸ್ವಚ್ಛತೆಗೆ ಮೊದಲು ಆದ್ಯತೆ ನೀಡುವ ಮೂಲಕ ಸಾಂಕ್ರಾಮಿಕ ರೋಗಗಳಿಂದ ಗ್ರಾಮದ ಜನರ ಅರೋಗ್ಯ ಕಾಪಾಡಬೇಕು’ ಎಂದು ತಾಲ್ಲೂಕು ಪಂಚಾಯಿತಿ ಇಒ ಶಶಿಧರ ಹಿರೇಮಠ ಹೇಳಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಮಳೆಗಾಲದಲ್ಲಿ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಮಳೆಗೆ ಚರಂಡಿಗಳಲ್ಲಿ ತ್ಯಾಜ್ಯ ಸಂಗ್ರಹವಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿದೆ. ಅದಕ್ಕೆ ಮುಂಜಾಗ್ರತಾ ಕ್ರಮವಾಗಿ ಚರಂಡಿಗಳನ್ನು ಸ್ವಚ್ಛತೆಗೊಳಿಸಿಬೇಕು’ ಎಂದು ಸೂಚಿಸಿದರು.

ಪ್ರತಿ ಗ್ರಾಮದಲ್ಲಿ ಸ್ವಚ್ಛತಾ ವಾಹನದ ಮೂಲಕ ತ್ಯಾಜ್ಯ ನಿರ್ವಹಣೆ ಮಾಡುವುದು ಹಾಗೂ ಶುದ್ಧ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡುಬೇಕು. ಹಾಳಾದ ಪೈಪ್ಗಳ ದುರಸ್ತಿ ಸೇರಿದಂತೆ ಇತರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ನರೇಗಾ ಯೋಜನೆಯಡಿ ಅಭಿವೃದ್ಧಿ ಕಾಮಗಾರಿಗಳು ಮುಂದುವರಿದಿದ್ದು, ಗೋ ಕಟ್ಟೆ, ನಾಲ ಹೂಳೆತ್ತುವುದು ಹಾಗೂ ಕಾಲುವೆ ಹೂಳೆತ್ತುವುದು, ನರೇಗಾ ಕೂಲಿ ಕಾರ್ಮಿಕರಿಗೆ ಬೇಡಿಕೆ ಪಡೆದು ಕೂಲಿ ಕೆಲಸ ನೀಡಲು ಪಿಡಿಒ ಗಳಿಗೆ ಸೂಚಿಸಿದರು.

ಸಹಾಯಕ ನಿರ್ದೇಶಕ ಕಿರಾಣಬಾಬು ಮಾತನಾಡಿ, ಜೂನ್ ತಿಂಗಳ ಅಂತ್ಯದವರೆಗೆ ಕಡ್ಡಾಯವಾಗಿ ಬಾಕಿ ಉಳಿದ ಇ-ಕೆವೈಸಿ ಪೂರ್ಣಗೊಳಿಸಲು ಹಾಗೂ ಕೂಲಿ ಬೇಡಿಕೆ ಸಲ್ಲಿಸಿದ ಕಾರ್ಮಿಕರಿಗೆ ನರೇಗಾ ಕೆಲಸ ಒದಗಿಸಲು ತಿಳಿಸಿದರು.

ಸಹಾಯಕ ಲೆಕ್ಕಾಧಿಕಾರಿ ಶರಣಬಸವ, ಟಿಸಿ ರವೀಂದ್ರ ದೇಸಾಯಿ, ಟಿಐಇಸಿ ದುರ್ಗೇಶ್, ಟಿಎಂಐಎಸ್ ಮಲ್ಲಿಕಾರ್ಜುನ, ಗ್ರಾಪಂ ಪಿಡಿಒ, ಕಂಪ್ಯೂಟರ್ ಆಪರೇಟರ್ಗಳು ಹಾಗೂ ತಾಂತ್ರಿಕ ಸಂಯೋಜಕರು, ತಾಪಂ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-30-1041674255

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.