ಯಾದಗಿರಿ: ‘ಸಾಮಾಜಿಕ ನ್ಯಾಯದ ಪರವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿ ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಒಬಿಸಿ ಮೀಸಲಾತಿ ಪ್ರಮಾಣ ಶೇ 56ಕ್ಕೆ ಹೆಚ್ಚಿಸಬೇಕು. ಇದರ ಅನುಗುಣವಾಗಿಯೇ 56 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಬೇಕು’ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಒತ್ತಾಯಿಸಿದರು.

‘ಸಾಮಾಜಿಕ ನ್ಯಾಯವೆಂದು ಕೇವಲ ಬಾಯಿ ಮಾತಿನಲ್ಲಿ ಹೇಳಿದರೆ ಸಾಲದು. ಅದಕ್ಕೆ ಬದ್ಧರಾಗಿ ಕರ್ತವ್ಯದ ಪಾಲನೆಯೂ ಮಾಡಬೇಕು. ವಿಶೇಷ ಕಾಯ್ದೆಯಾದರೂ ಜಾರಿ ಮಾಡಿ, ಸುಪ್ರೀಂಕೋರ್ಟ್ಗೆ ಮೊರೆಯಾದರೂ ಹೋಗಿ. ಶಿಕ್ಷಣ ಮತ್ತು ಉದ್ಯೋಗದಲ್ಲಿ 56 ಪರ್ಸೆಂಟ್ ಮೀಸಲಾತಿ ಪಾಲನೆಯಾಗಬೇಕು’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಈ ಹಿಂದಿನ ಬಿಜೆಪಿ ಸರ್ಕಾರವು ಎಸ್ಸಿ, ಎಸ್ಟಿ ಮೀಸಲಾತಿಯನ್ನು ಹೆಚ್ಚಿಸಲು ನಿರ್ಧರಿಸಿತ್ತು. ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಪಕ್ಷಾತೀತವಾಗಿ ಸರ್ವಾನುಮತದಿಂದ ಮೀಸಲಾತಿ ಹೆಚ್ಚಳಕ್ಕೆ ಅಂಗೀಕರಿಸಿದ್ದರು. ಜೊತೆಗೆ ರಾಜ್ಯಪಾಲರ ಅಂಕಿತವೂ ಬಿದ್ದು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದರೂ ಇದುವರೆಗೂ ಸಂವಿಧಾನದ 9ನೇ ಪರಿಚ್ಛೇದದಡಿ ಸೇರಿಸಲು ಸಾಧ್ಯವಾಗಿಲ್ಲ’ ಎಂದರು.

‘ಯಾರೋ ನ್ಯಾಯಾಲಯಕ್ಕೆ ಹೋದರು ಎಂಬ ಕಾರಣಕ್ಕೆ ಶೇ 56ರಷ್ಟು ಮೀಸಲಾತಿ ಬದಲು ಶೇ 50ರಷ್ಟರಲ್ಲಿ ನೇಮಕಾತಿ ಮಾಡಿಕೊಳ್ಳುವುದು ಸಾಮಾಜಿಕ ನ್ಯಾಯವೇ? ಈ ಬಗ್ಗೆ ಸುಪ್ರೀಂಕೋರ್ಟ್ನಲ್ಲಿ ಎಸ್ಎಲ್ಪಿ ಏಕೆ ಹಾಕಿಲ್ಲ? ಎಲ್ಲ ಪಕ್ಷಗಳ ಸಭೆ ಕರೆದು ಅವರ ಅಭಿಪ್ರಾಯಗಳನ್ನು ಏಕೆ ಕೇಳುತ್ತಿಲ್ಲ’ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಎಲ್ಲ ಪಕ್ಷಗಳ ಸಭೆ ಕರೆದು, ಸರ್ವ ಪಕ್ಷಗಳ ನಿಯೋಗವನ್ನು ದೆಹಲಿಗೆ ಕರೆದೊಯ್ಯಬೇಕು. ಮೀಸಲಾತಿ ಪ್ರಮಾಣ ಶೇ 56ಕ್ಕೆ ಹೆಚ್ಚಿಸಿ ಸಂವಿಧಾನದ 9ನೇ ಶೆಡ್ಯೂಲ್ಗೆ ಸೇರಿಸುವಂತೆ ಪ್ರಧಾನಿ ಮೇಲೆ ಒತ್ತಡ ತರಬೇಕು. ರಾಷ್ಟ್ರಮಟ್ಟದ ವಿರೋಧ ಪಕ್ಷದ ನಾಯಕರನ್ನೂ ಭೇಟಿ ಮಾಡಿ, ಅವರ ಗಮನಕ್ಕೆ ತರಬೇಕು’ ಎಂದು ಆಗ್ರಹಿಸಿದರು.

‘ಒಂದು ವೇಳೆ ವಿಳಂಬ ಮಾಡಿದರೆ ಅಧಿವೇಶನ ಮುಗಿದ ನಂತರ ಬೆಂಗಳೂರಿನಲ್ಲಿ ಸಾಂಕೇತಿಕ ಹೋರಾಟ ನಡೆಸಲಾಗುವುದು. ಆ ನಂತರ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಹೋರಾಟ ಮಾಡಬೇಕಾಗುತ್ತದೆ’ ಎಂದರು.

‘ಸಾಮಾಜಿಕ ನ್ಯಾಯದಲ್ಲಿ ಚಲ್ಲಾಟ ಆಡುವ ಬಿಜೆಪಿ, ಮೀಸಲಾತಿ ಪ್ರಮಾಣವನ್ನು ಶೇ 56ಕ್ಕೆ ಹೆಚ್ಚಿಸುವ ಕಡತವನ್ನು ಮೂರು ವರ್ಷಗಳಿಂದ ಕೋಲ್ಡ್ ಸ್ಟೋರೆಜ್ನಲ್ಲಿ ಇರಿಸಿದೆ. ಶೇ 7ರಷ್ಟು ಇರುವ ಮೇಲ್ಜಾತಿಯವರಿಗೆ ತರಾತುರಿಯಲ್ಲಿ 10 ಪರ್ಸೆಂಟ್ ಮೀಸಲಾತಿ ಜಾರಿಗೆ ತಂದರು. ಆದರೆ, ಎಸ್ಸಿ, ಎಸ್ಟಿ, ಒಬಿಸಿ ಸಮುದಾಯಗಳಿಗೆ ನ್ಯಾಯ ಒದಗಿಸಲು ಆಗುತ್ತಿಲ್ಲ. ಕೂಡಲೇ ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು’ ಎಂದು ಅವರು ಕೋರಿದರು.

ಪತ್ರಿಕಾಗೋಷ್ಠಿಯಲ್ಲಿ ಗೊಲ್ಲಪಲ್ಲಿ ವರದಾನಂದೇಶ್ವರ ಸ್ವಾಮೀಜಿ, ವಾಲ್ಮೀಕಿ ಸಮಾಜದ ಜಿಲ್ಲಾ ಅಧ್ಯಕ್ಷ ಗೌಡಪ್ಪಗೌಡ ಆಲ್ದಾಳ, ಉತ್ತರ ಕರ್ನಾಟಕ ಅಧ್ಯಕ್ಷ ಮಾರೆಪ್ಪ ನಾಯಕ ಮಗ್ದಂಪುರ, ಪ್ರಮುಖರಾದ ವೆಂಕಟೇಶ ಸಿಂಗಾಪುರ, ನಂದಕುಮಾರ ಮಾಲಿ ಪಾಟೀಲ, ಸಾಹೇಬಗೌಡ ನಾಯಕ, ಹಣಮಂತ ನಾಯಕ, ರಾಮು ನಾಯಕ, ನರಸಪ್ಪ ನಾಯಕ, ಸಿದ್ದಲಿಂಗಪ್ಪ ನಾಯಕ, ದೊಡ್ಡಯ್ಯ ನಾಯಕ, ಶರಣಪ್ಪ ಜಾಕನಳ್ಳಿ, ಶ್ರವಣಕುಮಾರ ಕುಮಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-30-1633033568

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.