ಯಾದಗಿರಿ: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ರಾಜಶೇಖರಗೌಡ ಪಾಟೀಲ ವಜ್ಜಲ್ ಅವರು ಗುರುವಾರ ಬೆಂಗಳೂರಿನಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ. ವಜ್ಜಲ್ ಅವರು, ಸುರಪುರ ತಾಲ್ಲೂಕಿನ ದೇವತ್ಕಲ್ ಮತ ಕ್ಷೇತ್ರದ ಸದಸ್ಯರಾಗಿದ್ದಾರೆ.

18 ತಿಂಗಳು ಅಧಿಕಾರ ನಡೆಸಿದ ವಜ್ಜಲ್ ಅವರು, ಕಾಂಗ್ರೆಸ್ ಪಕ್ಷದ ನಿಯಮದಂತೆ ಬೇರೊಬ್ಬರಿಗೆ ಅವಕಾಶ ಕಲ್ಪಿಸಿಕೊಡಲು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮಾರ್ಚ್ ತಿಂಗಳಲ್ಲಿ ನಿಧನರಾದ ವಡಗೇರಾ ಮತಕ್ಷೇತ್ರದ ಸದಸ್ಯ ಅಶೋಕರೆಡ್ಡಿ ಗೋನಾಲ ಅವರಿಗೆ ಜಿಪಂ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಎಲ್ಲ ಸದಸ್ಯರು ತೀರ್ಮಾನಿಸಿದ್ದರು. ಆದರೆ, ಅವರು ನಿಧನರಾದರು. ಮಾರ್ಚ್ 5ಕ್ಕೆ ವಜ್ಜಲ ಅವರಿಗೆ 15 ತಿಂಗಳ ಅಧಿಕಾರ ಮುಗಿದಿತ್ತು.ಪಂಚಾಯತ್ ರಾಜ್ ಅಧೀನ ಕಾರ್ಯದರ್ಶಿಗೆ ತಮ್ಮ ಅಧ್ಯಕ್ಷ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

‘ಇನ್ನೂ 10 ತಿಂಗಳು ಜಿಲ್ಲಾ ಪಂಚಾಯಿತಿಯ ಅಧಿಕಾರ ಅವಧಿ ಇದೆ. ಪಕ್ಷದ ಹೈಕಮಾಂಡ್ ಸೂಚಿಸಿದ್ದರಿಂದ ರಾಜೀನಾಮೆ ನೀಡಿದ್ದೇನೆ. ನಮ್ಮ ಅಧಿಕಾರ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಹೆಚ್ಚು ಒತ್ತು ನೀಡಿದ್ದೇನೆ. ಇನ್ನುಳಿದ ಅವಧಿಗೆ ಹಲವರು ಆಕಾಂಕ್ಷಿಗಳಿದ್ದಾರೆ. ಪಕ್ಷದ ನಿರ್ಧಾರವೇ ಅಂತಿಮ’ ಎಂದು ರಾಜಶೇಖರಗೌಡ ಪಾಟೀಲ ವಜ್ಜಲ್ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.