ಯಾದಗಿರಿ: ರಸ್ತೆಯ ಬದಿಯಲ್ಲಿ ನಿಂತಿದ್ದ ಟಿಪ್ಪರ್ಗೆ ಬುಲೆರೊ ವಾಹನವೊಂದು ಡಿಕ್ಕಿ ಹೊಡೆದು ಅದರಲ್ಲಿದ್ದ ಚಿಕನ್ ವ್ಯಾಪಾರಿ ಮೃತಪಟ್ಟಿದ್ದು, ಚಾಲಕ ಗಾಯಗೊಂಡಿದ್ದಾರೆ.

ನಗರದ ಲಾಡೇಜ್ ಗಲ್ಲಿ ನಿವಾಸಿ ಮಹಮದ್ ಇಕ್ಬಾಲ್ (64) ಮೃತರು. ಚಾಲಕ ಮಹಮದ್ ಗೌಸ್ ವಿರುದ್ಧ ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಕ್ಬಾಲ್ ಮತ್ತು ಗೌಸ್ ಅವರು ಯರಗೋಳ ಮಾರ್ಗದಿಂದ ಯಾದಗಿರಿಯತ್ತ ಬುಲೆರೊದಲ್ಲಿ ಪ್ರಯಾಣಿಸುತ್ತಿದ್ದರು. ಚಾಲಕ ಗೌಸ್, ಬುಲೆರೊ ವಾಹನವನ್ನು ಅತಿ ವೇಗವಾಗಿ ಮತ್ತು ನಿರ್ಲಕ್ಷ್ಯದಿಂದ ಚಾಲನೆ ಮಾಡಿದರು. ಯರಗೋಳ ಟೋಲ್ ಗೇಟ್ ಸಮೀಪದ ರಸ್ತೆಯ ಬದಿಯಲ್ಲಿ ನಿಂತಿದ್ದ ಟಿಪ್ಪರ್ಗೆ ಡಿಕ್ಕಿ ಹೊಡೆದರು ಎಂದು ಪೊಲೀಸರು ತಿಳಿಸಿದ್ದಾರೆ. ಡಿಕ್ಕಿಯಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ ಇಕ್ಬಾಲ್ ಅವರು ಚಿಕಿತ್ಸೆಗೆ ಸ್ಪಂದಿಸದೆ ಸೋಲಾಪುರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಹಣಕಾಸಿನ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿ ಅದು ವಿಕೋಪಕ್ಕೆ ತಿರುಗಿ ಒಬ್ಬ ಮೃತಪಟ್ಟಿದ್ದು, ಮತ್ತೊಬ್ಬನ ವಿರುದ್ಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಣಸಗಿ ತಾಲ್ಲೂಕಿನ ಮುದನೂರ (ಕೆ) ಗ್ರಾಮದ ಬಂದೇ ನವಾಜ್ ಹುಸೇನ್ ಸಾಬ್ (35) ಮೃತರು. ಭೀಮಣ್ಣ ಮಲ್ಲಪ್ಪ ವಿರುದ್ಧ ಪೊಲೀಸರು ಬಿಎನ್ಎಸ್ ಸೆಕ್ಷನ್ 105 (ಕೊಲೆಗೆ ಸಮಾನವಲ್ಲದ ನರಹತ್ಯೆ), ಸೆಕ್ಷನ್ 115(2), 118(1) ಸೇರಿ ಇತರೆ ಸೆಕ್ಷನ್ಗಳ ಅಡಿಯಲ್ಲಿ ಪ್ರಕಣ ದಾಖಲಿಸಿಕೊಂಡಿದ್ದಾರೆ.ಮುದನೂರು (ಬಿ) ಗ್ರಾಮದ ಮುಖ್ಯ ಕಾಲುವೆ ಸಮೀಪದಲ್ಲಿ ಭೀಮಣ್ಣ ಅವರು ತೆಗೆದುಕೊಂಡಿರುವ ಹಣ ಹಿಂದುರಿಗಿಸುವಂತೆ ಬಂದೇ ನವಾಜ್ಗೆ ತಾಕೀತು ಮಾಡಿದರು. ನಾನು ಹಣ ತೆಗೆದುಕೊಂಡಿಲ್ಲ ಸುಮ್ಮನೆ ಏಕೆ ಕೊಡಬೇಕು ಎಂದ ಪ್ರತ್ಯುತ್ತರ ನೀಡಿದ. ಇದರಿಂದ ಸಿಟ್ಟಾಗಿ ಆತನ ಮೇಲೆ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-30-956147979

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.