ಯಾದಗಿರಿ: ‘ನಿಗದಿತ ಅವಧಿಯೊಳಗೆ ಕಾಮಗಾರಿ ಮುಗಿಸಿ ಸಾರ್ವಜನಿಕರ ಉಪಯೋಗಕ್ಕೆ ವ್ಯವಸ್ಥೆ ಮಾಡಿಕೊಡಬೇಕು’ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಸೂಚಿಸಿದರು.

ನಗರದ ವಾರ್ಡ್ ನಂಬರ್ 30ರ ಹೊಸ ಬಸ್ ನಿಲ್ದಾಣ ಸಮೀಪದಲ್ಲಿ ಸೋಮವಾರ ₹60 ಲಕ್ಷ ಅನುದಾನದ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಗುಣಮಟ್ಟದಿಂದ ಕೂಡಿರಬೇಕು. ನಗರದ ವಿವಿಧ ವಾರ್ಡ್ಗಳಲ್ಲಿನ ರಸ್ತೆ ಮತ್ತು ಚರಂಡಿ ನಿರ್ಮಾಣದ ಕಾರ್ಯವನ್ನು ಮುಂದಿನ ದಿನಗಳಲ್ಲಿ ಕೈಗೆತ್ತಿಕೊಳ್ಳಲಾಗುವುದು’ ಎಂದರು.

‘ಕೆಲಸ ಮುಗಿಯುವವರೆಗೂ ಸಂಚಾರಕ್ಕೆ ತೊಂದರೆಯಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು’ ಎಂದು ಕೋರಿದರು.

ನಗರಸಭೆ ಪೌರಾಯುಕ್ತ ಉಮೇಶ ಚವ್ಹಾಣ, ಎಂಜಿನಿಯರ್ ರವಿಕುಮಾರ, ಪ್ರಮುಖರಾದ ಗಣೇಶ ದುಪ್ಪಲ್ಲಿ, ಚನ್ನಕೇಶವ ಬಾಣತಿಹಾಳ, ಮಲ್ಲಿಕಾರ್ಜುನ ಈಟೆ, ಸುರೇಶ ಮಡ್ಡಿ, ತಿಮ್ಮಣ್ಣ ನಾಯಕ, ಸೋಮು ಮಸಕನಳ್ಳಿ, ಸಾಬಣ್ಣ ಬಾಡಿಯಾಳ, ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-30-557453373

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.