ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಎಸ್‌ಸಿ, ಎಸ್‌ಟಿ ಕುಂದುಕೊರತೆ ಸಭೆ

Last Updated 23 ಸೆಪ್ಟೆಂಬರ್ 2021, 16:25 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಗುರುವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ತಮ್ಮ ಮೇಲೆ ದೌರ್ಜನ್ಯವಾದರೆ ಕೂಡಲೇ ಮಾಹಿತಿ ನೀಡಿ ಎಂದು ಮನವಿ ಮಾಡಿದರು.

ಈ ವೇಳೆ ಜಿಲ್ಲೆಯ ಪರಿಶಿಷ್ಟ ಜಾತಿಯವರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ. ಇವುಗಳನ್ನು ತಡೆಗಟ್ಟಲು ಪೊಲೀಸರು ಮುಂದಾಗಬೇಕು. ಜಾತೀಯತೆ ಇನ್ನೂ ಜೀವಂತವಾಗಿದೆ. ದೇವಸ್ಥಾನಗಳಲ್ಲಿ ಪ್ರವೇಶವಿಲ್ಲ. ಹಿಂದೂಗಳಾದರೂ ದೇವಸ್ಥಾನಕ್ಕೆ ಪ್ರವೇಶವಿಲ್ಲ. ಇದರಿಂದ ತುಂಬಾ ನೋವಾಗಿದೆ ಎಂದು ಮುಖಂಡರೊಬ್ಬರು ತಮ್ಮ ಅಳಲು ತೋಡಿಕೊಂಡರು.

ಇದೇ ರೀತಿ ಅನೇಕ ಎಸ್‌ಸಿ, ಎಸ್‌ಟಿ ಮುಖಂಡರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಇದಕ್ಕೆ ಸೂಕ್ತವಾಗಿ ಸ್ಪಂದಿಸಿದ ಎಸ್‌ಪಿಯವರು ಸೂಕ್ತ ಕ್ರಮ ವಹಿಸುವ ಬಗ್ಗೆ ಭರವಸೆ ನೀಡಿದರು.

ಡಿವೈಎಸ್‌ಪಿ ಸಂತೋಷ ಚನ್ನಟ್ಟಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಸ್‌.ಎಸ್‌.ಚನ್ನಬಸವ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT