ಯಾದಗಿರಿ: ಇದೇ ಮೇ 29ರಿಂದ ಶಾಲೆಗಳು ಆರಂಭವಾಗಲಿದ್ದು, ಕಳೆದ ಎರಡು ದಿನಗಳಿಂದ 2026-27ನೇ ಸಾಲಿನ ಹೊಸ ವಿದ್ಯಾರ್ಥಿಗಳ ದಾಖಲಾತಿ ಆಂದೋಲನವನ್ನು ಶಾಲಾ ಶಿಕ್ಷಕರು ಭರದಿಂದ ನಡೆಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಿಬ್ಬಂದಿ, ಶಾಲೆಯ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸಿದರು. ಗ್ರಾಮದ ಪ್ರಮುಖ ರಸ್ತೆ, ವೃತ್ತ ಹಾಗೂ ಲೇಔಟ್ಗಳಲ್ಲಿ ಶಾಲಾ ಶಿಕ್ಷಕರು ಆಂದೋಲನ ನಡೆಸಿದರು. ಸಾರ್ವಜನಿಕರಿಗೆ ಹಾಗೂ ಪೋಷಕರಿಗೆ ಕರಪತ್ರ ಹಂಚುವ ಮೂಲಕ ಸರ್ಕಾರಿ ಶಾಲೆಯ ಮಹತ್ವವನ್ನು ಮನವರಿಕೆ ಮಾಡಿಕೊಡಲಾಯಿತು.

ಗ್ರಾಮೀಣ ಭಾಗದ ಪ್ರತಿಯೊಂದು ಮನೆಗೂ ಮಾಹಿತಿ ತಲುಪಿಸುವ ನಿಟ್ಟಿನಲ್ಲಿ ಆಟೊ ಮೂಲಕ ಧ್ವನಿವರ್ಧಕ (ಮೈಕ್) ಬಳಸಿ ಪ್ರಚಾರ ಕೈಗೊಳ್ಳಲಾಯಿತು. ಈ ವೇಳೆ ಶಾಲೆಯ ಸವಲತ್ತು ಮತ್ತು ವಿಶೇಷತೆಗಳನ್ನು ಒಳಗೊಂಡ ಆಕರ್ಷಕ ಪೋಸ್ಟರ್ ಬಿಡುಗಡೆ ಮಾಡಿ, ಪ್ರಮುಖ ಸ್ಥಳಗಳಲ್ಲಿ ಪ್ರದರ್ಶಿಸಿದರು.

ಈ ವೇಳೆ ಸರ್ಕಾರಿ ಶಾಲೆಯ ಸೌಲಭ್ಯಗಳಾದ ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಮಧ್ಯಾಹ್ನದ ಬಿಸಿಯೂಟ, ಶೂ-ಸಾಕ್ಸ್, ವಿದ್ಯಾರ್ಥಿ ವೇತನ, ಸುಸಜ್ಜಿತ ತರಗತಿ, ಗ್ರಂಥಾಲಯ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ಸೌಲಭ್ಯ ಹಾಗೂ ನುರಿತ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ಹಾಗೂ ಶಾಲಾ ವಿಶೇಷತೆಗಳಾದ ಸಹಪಠ್ಯ ಚಟುವಟಿಕೆಗಳು, ಪರಿಸರಯುಕ್ತ ಶಿಕ್ಷಣ, ಪ್ರಾಯೋಗಿಕ ಪಾಠಗಳ ಶಿಕ್ಷಣ, ಮೌಲ್ಯ ಶಿಕ್ಷಣದಂತಹ ಮತ್ತಿತರೆ ಸೌಲಭ್ಯಗಳ ಬಗ್ಗೆ ಪಾಲಕರಿಗೆ ಮನವರಿಕೆ ಮಾಡಿಕೊಡಲಾಯಿತು.

ಗುರುಮಠಕಲ್ ತಾಲ್ಲೂಕಿನ ಕಂದಕೂರಿನ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಸ್ವಚ್ಛತೆ ಕಾರ್ಯಕ್ರಮ ನಡೆಸಲಾಯಿತು. ಶಾಲೆ ಮುಖ್ಯಶಿಕ್ಷಕ ಬಸಪ್ಪ ಅವರು ಶಾಲೆಯ ಸಿಬ್ಬಂದಿಯೊಂದಿಗೆ ಸ್ವಚ್ಛತೆಗೆ ಚಾಲನೆ ನೀಡಿದರು.

ವರ್ಗಕೋಣೆಗಳ ಸ್ವಚ್ಛತೆ, ಆವರಣದ, ಬಿಸಿಯೂಟ ಕೋಣೆ, ವಾಟರ್ ಟ್ಯಾಂಕ್ಗಳನ್ನು ಸ್ವಚ್ಛತೆ ಮಾಡಲಾಯಿತು. ನಲ್ಲಿಗಳ ಅಳವಡಿಕೆ, ಮೇಲ್ಛಾವಣಿಯ ನೀರು ಸರಗವಾಗಿ ಹರಿದು ಹೋಗುವಂತಹ ವ್ಯವಸ್ಥೆ ಮಾಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-30-677638272

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.