ಯಾದಗಿರಿ: ಇಲ್ಲಿನ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಬುಧವಾರ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಗ್ರಾಮೀಣ ಭಾಗದ 40 ಮಹಿಳಾ ಫಲಾನುಭವಿಗಳಿಗೆ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರು ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಮಹಿಳೆಯರಿಗೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಎಲ್ಲಾ ಮಹಿಳೆಯರು ಅದರ ಲಾಭ ಪಡೆದುಕೊಂಡು ಆರ್ಥಿಕವಾಗಿ ಸ್ವಾವಲಂಬನೆ ಜೀವನ ಸಾಗಿಸಬೇಕು’ ಎಂದರು.

‘ಯಾದಗಿರಿ ವಿಧಾನಸಭಾ ಕ್ಷೇತ್ರವು ವಿಸ್ತಾರವಾಗಿದೆ. ಕೇವಲ ಒಂದು ಭಾಗದಿಂದ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಮಾಡಿರುವುದು ಕಂಡು ಬರುತ್ತಿದೆ’ ಎಂದ ಶಾಸಕರು, ನಿಗಮದ ಜಿಲ್ಲಾ ವ್ಯವಸ್ಥಾಪಕಿ ಪ್ರಿಯದರ್ಶಿನಿ ಅವರನ್ನು ತರಾಟೆಗೆ ತೆಗೆದುಕೊಂಡರು. ‘ಎಲ್ಲಾ ಭಾಗದ ಜನರಲ್ಲಿ ಜಾಗೃತಿ ಮೂಡಿಸಿ, ಮಹಿಳೆಯರಿಗೆ ಯೋಜನೆಗಳ ಲಾಭ ತಲುಪಿಸಿ’ ಎಂದು ಸೂಚಿಸಿದರು.

ನಿಗಮದ ಮೌನೇಶ, ಸುನೀಲ್, ಸಾಯಿಬಣ್ಣ ಕೆಂಗೂರಿ, ಶರಣಗೌಡ ಕುರಕುಂದಿ, ತಿಮ್ಮಣ್ಣ ನಾಯಕ, ಶರಣಗೌಡ ಬಲಕಲ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-30-1350607348

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.