ಶಹಾಪುರ (ಯಾದಗಿರಿ ಜಿಲ್ಲೆ): ನಗರದ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಸಹಕಾರ ಸಂಘದ (ಬ್ಯಾಂಕ್) ಅಧ್ಯಕ್ಷರ ಸಹಿ ನಕಲು ಮಾಡಿ ₹6.62 ಕೋಟಿ ದುರ್ಬಳಕೆ ಮಾಡಿಕೊಂಡ ಆರೋಪದಡಿ ಬ್ಯಾಂಕ್ ಸಿಇಒ ಸೇರಿ ಮೂವರ ವಿರುದ್ಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಧ್ಯಕ್ಷ ಬಸನಗೌಡ ಮಾಲಿ ಪಾಟೀಲ ನೀಡಿದ ದೂರಿನ ಅನ್ವಯ ಬ್ಯಾಂಕ್ ಸಿಇಒ ರವಿಕಿರಣರೆಡ್ಡಿ, ಸಹಾಯಕ ವ್ಯವಸ್ಥಾಪಕ ವೆಂಕಟರೆಡ್ಡಿ ಹಾಗೂ ಪಿಗ್ಮಿ ಏಜೆಂಟ್ ಸಂಗಣ್ಣ ಬಸಲಿಂಗಪ್ಪ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಆರೋಪಿಗಳು 2023ರಿಂದ 2025ರ ನಡುವೆ ಸಾಲದ 222 ಅರ್ಜಿಗಳಿಗೆ ಅಧ್ಯಕ್ಷರ ಸಹಿ ನಕಲು ಮಾಡಿ, ₹6.62 ಕೋಟಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಸಾಲಕ್ಕಾಗಿ ಮಂಜೂರು ಮಾಡಿದ ಹಣವನ್ನು ಆನ್ಲೈನ್ ಮೂಲಕ ಸಂಗಣ್ಣ ಅವರ ಖಾತೆಗೆ ವರ್ಗಾಯಿಸಿ ವಂಚನೆ ಎಸಗಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-51-1334708524

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.