ಶಹಾಪುರ (ಯಾದಗಿರಿ ಜಿಲ್ಲೆ): ತಾಲ್ಲೂಕಿನ ಗ್ರಾಮವೊಂದರಲ್ಲಿ ಇಬ್ಬರು ಯುವಕರು ಸೇರಿ 12 ವರ್ಷದ ಬಾಲಕಿ ಮೇಲೆ ಭಾನುವಾರ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.

‘ಗ್ರಾಮದ ಜಮೀನೊಂದರಲ್ಲಿ ಮನೆ ಮಾಡಿಕೊಂಡು ಕುಟುಂಬ ಸಮೇತ ವಾಸವಾಗಿದ್ದೇವೆ. ಶನಿವಾರ ರಾತ್ರಿ ಮನೆ ಎದುರು ಕುಟುಂಬ ಸದಸ್ಯರು ಮಲಗಿದ್ದಾಗ ಮಗಳು ಕಾಣಿಸಲಿಲ್ಲ. ಬೇರೆಡೆ ಹುಡುಕಾಡಿದಾಗ ಕಾಲುವೆ ಪಕ್ಕದ ಒಡ್ಡಿನಲ್ಲಿ ಪ್ರಜ್ಞೆತಪ್ಪಿ ಬಿದ್ದಿದ್ದಳು. ಅವಳನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದೆವು. ನಂತರ ವಿಚಾರಿಸಿದಾಗ, ಭಾನುವಾರ ಬೆಳಿಗ್ಗೆ ಬಹಿರ್ದೆಸೆಗೆ ತೆರಳಿದ್ದಾಗ ಇಬ್ಬರು ಅಪರಿಚಿತರು ಬಂದು ಕೈಕಾಲು ಕಟ್ಟಿ ಅತ್ಯಾಚಾರಕ್ಕೆ ಯತ್ನಿಸಿದರು. ಅದೇ ವೇಳೆ ರಸ್ತೆ ಮೇಲೆ ವಾಹನ ಬರುವುದನ್ನು ಕಂಡು, ಮಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ. ಇದರಿಂದ ಹೆದರಿದ ಮಗಳು ಪ್ರಜ್ಞೆತಪ್ಪಿದ್ದಾಳೆ’ ಎಂದು ಬಾಲಕಿಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ ಹಾಗೂ ಸುರಪುರ ಡಿವೈಎಸ್ಪಿ ಜಾವೇದ್ ಇನಾಂದಾರ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-34-1363082338

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.