ಯಾದಗಿರಿ: ‘ಜೈ ಛತ್ರಪತಿ ಶಿವಾಜಿ ಮಹಾರಾಜ ಸೇನಾ ಹಾಗೂ ವೀರ ಸಾವರ್ಕರ ಸೇನಾ ವತಿಯಿಂದ ಮೇ 21ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವದ ಅಂಗವಾಗಿ ಶೋಭಯಾತ್ರೆ ಹಮ್ಮಿಕೊಳ್ಳಲಾಗಿದೆ’ ಎಂದು ಶಿವಾಜಿ ಮಹಾರಾಜ ಸೇನಾ ಅಧ್ಯಕ್ಷ ಪರಶುರಾಮ ಶೇಗುರಕರ್ ತಿಳಿಸಿದರು.

‘ಅಂದು ಸಂಜೆ 4ಕ್ಕೆ ಅಂಬಾಭವಾನಿ ಮಂದಿರದಿಂದ ಶೋಭಾಯಾತ್ರೆ ಹೊರಡಲಿದೆ. ಕನಕ ವೃತ್ತ, ಬಾಬು ಜಗಜೀವನರಾಂ ವೃತ್ತ, ವಾಲ್ಮೀಕಿ ನಗರ, ಹತ್ತಿಕುಣಿ ಕ್ರಾಸ್, ಗಾಂಧಿ ವೃತ್ತ, ಶಿವಾಜಿ ವೃತ್ತ, ಮೈಲಾಪುರ ಅಗಸಿಯ ಹನುಮಾನ ದೇವಸ್ಥಾನದಲ್ಲಿ ಶೋಭಾಯಾತ್ರೆ ಸಂಪನ್ನಗೊಳ್ಳಲಿದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಗಾಂಧಿ ವೃತ್ತದಲ್ಲಿ ಸಂಜೆ 7ಕ್ಕೆ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಹೈದರಾಬಾದ್ ಗೋಶಾಲಾ ಮಹಲ್ ಕ್ಷೇತ್ರದ ಶಾಸಕ ರಾಜಾಸಿಂಗ್ ಅವರ ದಿಕ್ಸೂಚಿ ಭಾಷಣ ಮಾಡುವರು. ರಾವೂರಿನ ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂಗಳು ಪಾಲ್ಗೊಳ್ಳಬೇಕು’ ಎಂದರು.

‘ಕಾರ್ಯಕ್ರಮಕ್ಕೆ ಸೂಕ್ತ ಬಂದೋಬಸ್ತ್ ಒದಗಿಸುವಂತೆ ಈಗಾಗಲೇ ಪೊಲೀಸ್ ಇಲಾಖೆಗೆ ಮನವಿ ಮಾಡಲಾಗಿದೆ. ಬಾಗಲಕೋಟೆಯಲ್ಲಿ ನಡೆದ ಘಟನೆಯು ಇಲ್ಲಿಯೂ ಮರುಕಳಿಸದಂತೆ ಎಚ್ಚರವಹಿಸುವಂತೆ ಕೋರಲಾಗಿದೆ’ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವೀರ ಸಾವರ್ಕರ ಸೇನಾ ಜಿಲ್ಲಾ ಅಧ್ಯಕ್ಷ ತ್ಯಾಗರಾಜ ತಾಂಡೂರಕರ್, ಪ್ರಮುಖರಾದ ಸುರೇಶ ನಾಯಕ, ವೀರೇಶ್, ಪವನ ಲಿಂಗೇರಿ, ಶಿವಾನಂದ ವಾಲಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-30-585304390

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.