ಯಾದಗಿರಿ: ದೇಶದ ಆರ್ಥಿಕತೆ ನಿಧಾನಗತಿಯಲ್ಲಿ ಸಾಗುತ್ತಿದ್ದು, ಕಾರ್ಖಾನೆಗಳು ಮುಚ್ಚಿ ಹೋಗುತ್ತಿವೆ. ಇದರಿಂದ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರ ಬದುಕಿನ ಮೇಲೆ ಪರಿಣಾಮ ಬೀರುತ್ತಿದೆ’ ಎಂದು ಎಐಯುಟಿಯುಸಿ ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ ಎಂ.ಜಿ. ಹೇಳಿದರು.

ಇಲ್ಲಿನ ಕನ್ನಡ ಸಾಹಿತ್ಯ ಪರಿಷತ್ ಸಭಾಭವನದಲ್ಲಿ ಶುಕ್ರವಾರ ಕಾರ್ಮಿಕರ ದಿನಾಚರಣೆ ಅಂಗವಾಗಿ ಎಐಯುಟಿಯುಸಿ ಜಿಲ್ಲಾ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮುಚ್ಚುತ್ತಿರುವ ಕಾರ್ಖಾನೆ ಗಳಿಂದಾಗಿ ಬಹು ಸಂಖ್ಯೆಯಲ್ಲಿ ಕಾರ್ಮಿಕರು ಕೆಲಸ ಕಳೆದುಕೊಳ್ಳುತ್ತಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕಾರ್ಮಿಕರ ಹಿತ ಕಾಪಾಡಲು ಮುಂದಾಗುತ್ತಿಲ್ಲ. ಬದಲಿಗೆ, ಬಂಡವಾಳಶಾಹಿಗಳ ಹಿತ ಕಾಪಾಡುತ್ತಿವೆ’ ಎಂದರು.

‘ದೇಶದಲ್ಲಿ ದಿನೇ ದಿನೇ ನಿರುದ್ಯೋಗ ಹೆಚ್ಚಳವಾಗುತ್ತಿದೆ. ಈ ಸಮಸ್ಯೆಯ ವಿರುದ್ಧ ಇಡೀ ಕಾರ್ಮಿಕರು ತಮ್ಮ ಹಕ್ಕಿಗಾಗಿ ಹೋರಾಟ ನಡೆಸಲು ಇಂದು ಪಣ ತೊಡಬೇಕು’ ಎಂದು ಹೇಳಿದರು.

ಜಿಲ್ಲಾ ಅಧ್ಯಕ್ಷೆ ಎಂ. ಉಮಾದೇವಿ ಮಾತನಾಡಿ, ‘ಕಾರ್ಮಿಕರ ದಿನಾಚರಣೆ ಯು ಕಾರ್ಮಿಕರಲ್ಲಿ ಹೋರಾಟದ ಸ್ಫೂರ್ತಿಯನ್ನು ತುಂಬುತ್ತದೆ’ ಎಂದರು.

ಜಿಲ್ಲಾ ಸಮಿತಿ ಸದಸ್ಯೆ ರೇಣುಕಾ ಪಾಟೀಲ ಮಾತನಾಡಿದರು. ಕಾರ್ಯಕ್ರಮದಲ್ಲಿ ನಿರ್ಮಲಾ, ಶರಣಪ್ಪ, ಪ್ರೀತಿ, ಸರಸ್ವತಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.