ಯಾದಗಿರಿ: ಬೆಳಗಾವಿಯ ಶಿವಂ ಅಸೋಸಿಯೆಟ್ಸ್ ಕಂಪನಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಂಪನಿಯ ವಹಿವಾಟಿನ ಹಣವನ್ನು ತಡೆಹಿಡಿಯಲಾಗಿದೆ. ಈ ಕಂಪನಿಗೆ ಜಿಲ್ಲೆಯ ಸಾರ್ವಜನಿಕರು ಹಣ ಹೂಡಿಕೆ ಮಾಡಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ತಿಳಿಸಿದ್ದಾರೆ.

ಶಿವಂ ಕಪನಿಯವರು ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿನ ಸುಮಾರು 10,000 ಜನರಿಂದ ₹ 3 ಲಕ್ಷ ಪಡೆದು, ಅವರಿಗೆ ಪ್ರತಿ ತಿಂಗಳು ಪ್ರತಿಶತ ಶೇ 3ರಷ್ಟು ಹಣವನ್ನು ಸಂದಾಯ ಮಾಡುತ್ತಿರುವುದು ತಿಳಿದು ಬಂದಿದ್ದು. ಶಿವಂ ಅಸೋಸಿಯೆಟ್ಸ್ ಕಂಪೆನಿಯು ಸಾರ್ವಜನಿಕರಿಗೆ ಮೋಸ ಮಾಡಿ ಹಣವನ್ನು ಪಡೆದು ವಂಚನೆ ಮಾಡುತ್ತಿದೆ. ಈ ಕಂಪನಿಯಲ್ಲಿ ಯಾರೂ ಹಣ ಹೂಡಿಕೆ ಮಾಡಿ ಮೋಸ ಹೋಗಬಾರದು. ಬೆಳಗಾವಿ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಂಪನಿಯ ವಹಿವಾಟಿನ ಹಣವನ್ನು ತಡೆಹಿಡಿಯಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಈ ಕಂಪನಿಯಲ್ಲಿ ಹೂಡಿಕೆ ಮಾಡಿ ಮೋಸ ಹೋಗಿದ್ದಲ್ಲಿ ಸಿಇಎನ್ ಪೊಲೀಸ್ ಠಾಣೆಯ ಮೊಬೈಲ್ ಸಂಖ್ಯೆ: 9480803664ಗೆ ಸಂಪರ್ಕಿಸಬಹುದು ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-30-892823907

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.