ಯಾದಗಿರಿ: ‘ಮಕ್ಕಳು ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ರಾಜ್ಯ ಬಾಲ ಭವನ ಸೊಸೈಟಿ ಉಪಾಧ್ಯಕ್ಷ ಅನಿಲಕುಮಾರ ಜಮಾದಾರ ಹೇಳಿದರು.

ಇಲ್ಲಿನ ಜಿಲ್ಲಾ ಬಾಲ ಭವನ ಸಭಾಂಗಣದಲ್ಲಿ ಬುಧವಾರ ರಾಜ್ಯ ಬಾಲ ಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರದಲ್ಲಿ ಅವರು ಮಾತನಾಡಿದರು.

‘ಬೇಸಿಗೆ ಸಮಯದಲ್ಲಿ ಮಕ್ಕಳಿಗೆ ಇಂತಹ ಶಿಬಿರಗಳು ತುಂಬ ಅವಶ್ಯಕ. ಶಾಲೆಯ ಪರೀಕ್ಷೆಗಳು ಮುಕ್ತಾಯ ನಂತರ ಪೋಷಕರು ಶುಲ್ಕ ಪಾವತಿಸಿ ತಮ್ಮ ಮಕ್ಕಳನ್ನು ಹೆಚ್ಚಿನ ವಿದ್ಯಾಭ್ಯಾಸ, ಕೋಚಿಂಗ್ ತರಗತಿಗೆ ಸೇರಿಸುತ್ತಾರೆ. ಮಕ್ಕಳಿಗೆ ಓದುವುದರ ಜೊತೆಗೆ ಪಠ್ಯೇತರ ಚಟುವಟಿಕೆಗಳು ತುಂಬ ಅವಶ್ಯಕತೆ ಇದೆ’ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಡಿಯಾ ಮಾತನಾಡಿ, ‘ಬೇಸಿಗೆಯಲ್ಲಿ ಶಿಬಿರ ಆಯೋಜನೆ ಮಾಡಿ ಮಕ್ಕಳಿಗೆ ಅನುಕೂಲ ಆಗುವಂತೆ ಅವಶ್ಯಕವಿರುವ ಚಟುವಟಿಕೆಗಳನ್ನು ಕಲಿಸಲಾಗುತ್ತಿದೆ. ಚಿತ್ರಕಲೆ, ನೃತ್ಯ, ಮಲ್ಲಕಂಬ, ಈಜು ಸೇರಿದಂತೆ ಇತರೆ ತರಬೇತಿ ನೀಡಲಾಗುತ್ತಿದೆ’ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ ಮಾತನಾಡಿ, ‘15 ದಿನಗಳ ಬೇಸಿಗೆ ಶಿಬಿರದಲ್ಲಿ ನಗರದ ಸುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಮೊಬೈಲ್ಗಳಲ್ಲಿ ಮುಳುಗಿ ಸಮಯವನ್ನು ವ್ಯರ್ಥ ಮಾಡುವ ಬದಲು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಬಹುದು’ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಾವಿತ್ರಿ ಗುಗ್ಗರಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ದಿನೇಶ್ ಕುಮಾರ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ನರೇಂದ್ರರೆಡ್ಡಿ, ಜಿಲ್ಲಾ ಸಂಯೋಜಕ ಅನಿಲಕುಮಾರ, ಶಿಬಿರದ ಸಂಪನ್ಮೂಲ ವ್ಯಕ್ತಿಗಳಾದ ದೇವಿಂದ್ರಪ್ಪ, ಅಶ್ವಿನಿ, ನಾಗರತ್ನ, ರವಿಕುಮಾರ, ಪ್ರಶಾಂತಕುಮಾರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-30-1136728217

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.