ಯಾದಗಿರಿ: ಸುರಪುರ ತಾಲ್ಲೂಕಿನ ಕೆಂಭಾವಿ ಸಮೀಪದ ನಗನೂರು ಗ್ರಾಮದ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯೊಬ್ಬರನ್ನು ಬಂಧಿಸಲಾಗಿದೆ.

ನಗನೂರು ಗ್ರಾಮದ ನಿವಾಸಿ ಬಸವರಾಜ ಭೀಮಣ್ಣ ಬೆಳ್ಳಿ ಬಂಧಿತ ಆರೋಪಿ. ಪರಸನಹಳ್ಳಿ ಗ್ರಾಮದ ಸರ್ವೆನಂ 296ರ ಜಮೀನಿನ ಮೇಲೆ ದಾಳಿ ಮಾಡಿದ ಅಧಿಕಾರಿಗಳ ತಂಡ, 4 ಕೆ.ಜಿ. 900 ಗ್ರಾಂ ಇರುವ 30 ಹಸಿ ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ ಎಂದು ಯಾದಗಿರಿ ಅಬಕಾರಿ ಉಪ ಆಯುಕ್ತೆ ಶಾರದಾ ಸಿ.ಕೋಲಕಾರ ತಿಳಿಸಿದ್ದಾರೆ.

ಆರೋಪಿಯ ವಿರುದ್ಧ ಎನ್ಡಿಪಿಎಸ್ ಕಾಯ್ದೆ 1985ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದಾಳಿಯಲ್ಲಿ ಸುರಪುರ ವಲಯದ ಅಬಕಾರಿ ನಿರೀಕ್ಷಕ ಕೇದಾರನಾಥ ಎಸ್.ಟಿ, ಅಬಕಾರಿ ಉಪ ನಿರೀಕ್ಷಕರಾದ ವಸಂತ ಕುಮಾರ್ಮತ್ತು, ಅನಿಲಕುಮಾರ, ಅಬಕಾರಿ ಹೆಡ್ಕಾನ್ಸ್ಟೆಬಲ್ಳಾದ ಯಮನಪ್ಪ, ಸಂಪತಕುಮಾರ ಸಂದೀಪನಾಯಕ, ವಾಹನ ಚಾಲಕ ರಮೇಶ ದೇಸಾಯಿ, ಗೃಹರಕ್ಷಕ ದಳದ ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-30-1961017416

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.