ಸುರಪುರ: ನಗರದ ಕುರುಬರ ಗಲ್ಲಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಸುಜಾತಾ ನಾಯ್ಕ ಅವರಿಗೆ 2024-25ನೇ ಸಾಲಿನ ಯಾದಗಿರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿದೆ.
ಕ್ರಿಯಾಶೀಲ ಶಿಕ್ಷಕಿಯಾಗಿರುವ ಇವರು ಮಕ್ಕಳ ಕಲಿಕೆಗೆ ಶ್ರಮಿಸುತ್ತಿದ್ದಾರೆ. ಇವರ ಆಯ್ಕೆಗೆ ಶಾಲೆಯ ಮುಖ್ಯ ಶಿಕ್ಷಕ, ಸಹ ಶಿಕ್ಷಕರು, ಎಸ್‍ಡಿಎಂಸಿ ಅಧ್ಯಕ್ಷ, ಪದಾಧಿಕಾರಿಗಳು, ವಾರ್ಡ್ ಸದಸ್ಯರು, ಶಿಕ್ಷಕರ ಸಂಘದ ಅಧ್ಯಕ್ಷ, ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.