ಸೋಮವಾರ, ಡಿಸೆಂಬರ್ 5, 2022
19 °C
7 ಜಿಲ್ಲೆಗಳ 28 ತಂಡಗಳ 336 ಆಟಗಾರರು ಭಾಗಿ

ವಿಭಾಗ ಮಟ್ಟ ಕಬಡ್ಡಿ; ಯಾದಗಿರಿ ಪ್ರಥಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಹಾಪುರ: ನಗರದ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ವಿಭಾಗ ಮಟ್ಟದ ಕಬಡ್ಡಿ ಕ್ರೀಡಾಕೂಟದಲ್ಲಿ 7 ಜಿಲ್ಲೆಗಳ ಕ್ರೀಡಾಪಟುಗಳು ಉತ್ಸಾಹದಿಂದ ಭಾಗಿಯಾದರು.

ಯಾದಗಿರಿ ಜಿಲ್ಲೆಯು ಬಾಲಕರ 14 ಮತ್ತು 17 ವಯೋಮಿತಿ ಕಬ್ಬಡ್ಡಿ ತಂಡ ಪ್ರಥಮ ಸ್ಥಾನ ಪಡೆದುಕೊಂಡಿತು. ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆಯಿತು.

ಬಾಲಕಿಯರ ವಿಭಾಗದಲ್ಲಿ 14 ವಯೋಮಿತಿಯಲ್ಲಿ ಕೊಪ್ಪಳ ಜಿಲ್ಲೆ ಪ್ರಥಮ ಸ್ಥಾನ, ಹಾಗೂ 17 ವಯೋಮಿತಿಯಲ್ಲಿ ಬಳ್ಳಾರಿ ಜಿಲ್ಲೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದರು. ದ್ವಿತೀಯ ಸ್ಥಾನವನ್ನು ಬಾಲಕರಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯು ಪಡೆದುಕೊಂಡವು. ಬಾಲಕಿಯರಲ್ಲಿ ದ್ವಿತೀಯ ರಾಯಚೂರ, ಯಾದಗಿರಿ ತಂಡವು
ಪಡೆದುಕೊಂಡವು.

ಕಲಬುರಗಿ, ಬೀದರ್, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯನಗರ ಜಿಲ್ಲೆಯ ಒಟ್ಟು 28 ತಂಡಗಳ 336 ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಜೇತ ತಂಡಗಳಿಗೆ ಟ್ರೋಫಿ ನೀಡಿ ಗೌರವಿಸಲಾಯಿತು. ‌

ಶಾಸಕ ದರ್ಶನಾಪುರ ಕ್ರೀಡಾಕೂಟ ಉದ್ಘಾಟಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು