ಯಾದಗಿರಿ: ನಗರದ31 ವಾರ್ಡ್‌ಗಳಲ್ಲಿ ಕೋವಿಡ್ರ‍್ಯಾಂಡಮ್ ಪರೀಕ್ಷೆ ನಡೆಸುವಂತೆ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ಅವಿನಾಶ ಜಗನ್ನಾಥ್ ಒತ್ತಾಯಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಜಿಲ್ಲಾಡಳಿತ ಭವನದ ಸಿಬ್ಬಂದಿಗೆಕೋವಿಡ್ ಪತ್ತೆಯಾಗಿದ್ದರಿಂದಜನರಲ್ಲಿ ಆತಂಕ ಮೂಡಿದೆ. ಇದರಿಂದ ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಸೋಂಕು ಸಮುದಾಯಕ್ಕೆ ಹರಡುವ ಸಾಧ್ಯತೆಗಳು ದಟ್ಟವಾಗಿರುವುದರಿಂದ ಜಿಲ್ಲಾಡಳಿತ ಇನ್ನಾದರೂ ಎಚ್ಚೆತ್ತುಕೊಂಡು ಪರೀಕ್ಷೆಗೆ ಮುಂದಾಗಬೇಕು ಎಂದುಆಗ್ರಹಿಸಿದ್ದಾರೆ.

ಜುಲೈ 3ರಂದು ಅಧಿಕಾರಿ, ಸಿಬ್ಬಂದಿ ಸ್ವಯಂ ಪ್ರೇರಿತವಾಗಿ ಪರೀಕ್ಷೆಗೆ ಒಳಗಾಗಿದ್ದರಿಂದ ಕೋವಿಡ್ ದೃಢಪಟ್ಟಿದೆ. ಹೀಗಾಗಿ ನಗರದಲ್ಲಿ ಎಲ್ಲ ಕಡೆ ಪರೀಕ್ಷೆ ಮಾಡಿಸುವುದರಿಂದ ಕೋವಿಡ್ ಪ್ರಕರಣಗಳನ್ನು ಶೀಘ್ರ ಪತ್ತೆ ಹಚ್ಚಲು ಸಾಧ್ಯವಾಗುತ್ತದೆ.ಸೋಂಕು ತೀವ್ರಗತಿಯಲ್ಲಿ ಹರಡುತ್ತಿದ್ದರೂ ಕ್ರಮ ವಹಿಸದೆಇರುವುದು ಸರಿಯಲ್ಲ. ಇನ್ನಾದರೂ ಸರ್ಕಾರ, ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕು. ಇಲ್ಲವಾದಲ್ಲಿ ಯುವ ಕಾಂಗ್ರೆಸ್ ಜಿಲ್ಲಾದ್ಯಂತ ಹೋರಾಟ ರೂಪಿಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.