ಯಾದಗಿರಿ: ಇಲ್ಲಿನ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಮಂಗಳವಾರ ವಿಎ ಹಾಗೂ ಆರ್ಐಗಳಿಗೆ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರು 17 ಲ್ಯಾಪ್ಟಾಪ್ಗಳನ್ನು ವಿತರಿಸಿದರು.

ಬಳಿಕ ಮಾತನಾಡಿದ ಅವರು, ‘ಕಂದಾಯ ಇಲಾಖೆಯ ಇ–ಆಫೀಸ್, ಇ–ಪಾವತಿಯಂತಹ ಕೆಲಸಗಳು ಗಣಕೀಕರಣದ ಮೂಲಕ ಮಾಡಬೇಕು. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಇಲಾಖೆಯಲ್ಲಿ ತಂತ್ರಜ್ಞಾನ ಅಳವಡಿಸಿ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯುವಂತೆ ಮಾಡಿದ್ದಾರೆ. ಲ್ಯಾಪ್ಟಾಪ್ಗಳನ್ನು ಸದ್ಬಳಕೆ ಮಾಡಿಕೊಂಡು, ಸಾರ್ವಜನಿಕರ ಕಾರ್ಯ ನಿಗದಿತ ಅವಧಿಯೊಳಗೆ ಮುಗಿಸಬೇಕು’ ಎಂದರು.

ತಹಶೀಲ್ದಾರ್ ಸುರೇಶ ಅಂಕಲಗಿ ಮಾತನಾಡಿ, ‘ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಕಾರ್ಯವೈಖರಿ ಹೆಚ್ಚಿಸುವ ಮತ್ತು ಡಾಟಾ ಎಂಟ್ರಿ ಮಾಡಲು ಅನುಕೂಲದ ಹಿತದೃಷ್ಟಿಯಿಂದ ಲ್ಯಾಪ್ಟಾಪ್ಗಳನ್ನು ನೀಡಿದೆ. ಸಾಧನಗಳ ಸದುಪಯೋಗದೊಂದಿಗೆ ಜನರ ಸೇವೆಯನ್ನು ವೇಗದಲ್ಲಿ ಮಾಡಲು ಮುಂದಾಗಬೇಕು’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಿಬ್ಬಂದಿ ಮಲ್ಲಿಕಾರ್ಜುನ ಬೂದಿಹಾಳ, ಮಲ್ಲಿಕಾರ್ಜುನ ಈಟೆ, ಗಿರೀಶ ರಾಯಕೋಟಿ, ರಾಜಶೇಖರ ಪಾಟೀಲ, ಬಸವರಾಜ, ಮುಖಂಡ ಶರಣಗೌಡ ಬಬಲಾದ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-30-105035507

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.