ವಡಗೇರಾ: ರಾಜ್ಯ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಎಫ್ಐಡಿ ವ್ಯವಸ್ಥೆಯಿಂದ ರೈತರಿಗೆ ರಸಗೊಬ್ಬರ ಖರೀದಿಯಲ್ಲಿ ಅನೇಕ ತೊಂದರೆಯಾಗುತ್ತಿದ್ದು, ಸರ್ಕಾರ ಈ ಕ್ರಮ ಕೈಬಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ತಹಶೀಲ್ದಾರ್ ಮಂಗಳಾ.ಎಂ ಅವರಿಗೆ ಮನವಿ ಸಲ್ಲಿಸಿದರು.

ಸಂಘದ ಜಿಲ್ಲಾಧ್ಯಕ್ಷ ಮಲ್ಲನಗೌಡ ಎಸ್. ಹಗರಟಗಿ ಮಾತನಾಡಿ, ‘ರೈತರು ತಮ್ಮ ಬೆಳೆಗಳ ಅವಶ್ಯಕತೆಗೆ ಅನುಗುಣವಾಗಿ ಯೂರಿಯಾ ಹಾಗೂ ಇತರ ರಸಗೊಬ್ಬರಗಳನ್ನು ಖರೀದಿಸಲು ಅವಕಾಶ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

‘ಎಫ್ಐಡಿ ವ್ಯವಸ್ಥೆಯಿಂದ ರಸಗೊಬ್ಬರ ವಿತರಣೆ ಗೊಂದಲಕ್ಕೆ ಕಾರಣವಾಗುತ್ತಿದ್ದು, ಹಲವಾರು ರೈತರಿಗೆ ಅಗತ್ಯ ಪ್ರಮಾಣದ ಗೊಬ್ಬರ ದೊರೆಯುತ್ತಿಲ್ಲ. ಇದರಿಂದ ಬೆಳೆಗಳ ಇಳುವರಿ ಕುಸಿಯುವ ಸಾಧ್ಯತೆ ಹೆಚ್ಚಿದ್ದು, ಕೆಲ ಬೆಳೆಗಳಿಗೆ ಹಾನಿಯಾಗುವ ಆತಂಕವೂ ಇದೆ’ ಎಂದರು.

ಮಾರುಕಟ್ಟೆಯಲ್ಲಿ ಯೂರಿಯಾ ಸೇರಿದಂತೆ ಅಗತ್ಯ ರಸಗೊಬ್ಬರಗಳು ಸಮರ್ಪಕವಾಗಿ ಲಭ್ಯವಾಗುವಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ರೈತರಿಗೆ ಯೂರಿಯಾ ಗೊಬ್ಬರದಲ್ಲಿ ಯಾವುದೇ ತೊಂದರೆ ಆಗದಂತೆ ಸರಬರಾಜು ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ರೈತ ಸಂಘದ ಪದಾಧಿಕಾರಿ ಶರಣು ಜಡಿ, ವಿದ್ಯಾಧರ ಜಾಕಾ, ತಿರುಮಲ, ಶಿವಶರಣಪ್ಪ ಸಾಹುಕಾರ, ಬಸ್ಸಯ್ಯ ಸ್ವಾಮಿ ಸೇರಿದಂತೆ ಅನೇಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-30-1533281418

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.