ವಡಗೇರಾ: ‘ಸರ್ಕಾರದ ಯೋಜನೆಗಳು ಸಕಾಲದಲ್ಲಿ ಫಲಾನುಭವಿಗಳಿಗೆ ತಲುಪಬೇಕಾದರೆ ಅಧಿಕಾರಿಗಳು ಪ್ರಾಮಾಣಿಕವಾಗಿ ಸೇವೆಯನ್ನು ಸಲ್ಲಿಸಬೇಕು’ ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಯೋಜನೆಗಳ ಅಧ್ಯಕ್ಷ ಖಾಜಾಮೈನೋದ್ದಿನ ಮಿರ್ಚಿ ಹೇಳಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ತಾಲ್ಲೂಕಿನ ವ್ಯಾಪ್ತಿಯಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆ ಪ್ರತಿಯೊಂದು ಗ್ರಾಮದ ಪ್ರತಿಯೊಬ್ಬರಿಗೂ ತಲುಪುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಹಾಗೆಯೆ ನಿಜವಾದ ಫಲಾನುಭವಿಗಳಿಗೆ ಯೋಜನೆಯ ಲಾಭ ಸಿಗಬೇಕು ಆ ನಿಟ್ಟಿನಲ್ಲಿ ಆಯಾ ಇಲಾಖೆಯ ಅಧಿಕಾರಿಗಳು ಹಾಗೂ ಸದಸ್ಯರು ಕಾರ್ಯವನ್ನು ನಿರ್ವಹಿಸಿಬೇಕು’ ಎಂದು ತಿಳಿಸಿದರು.

ತಾಪಂ ಇಒ ಶಶಿಧರ ಹಿರೇಮಠ ಮಾತನಾಡಿ, ‘ಪಂಚ ಗ್ಯಾರಂಟಿ ಯೋಜನೆ ಬಡವರಿಗಾಗಿ ದಿನ ದಲಿತರಿಗಾಗಿ ಸರ್ಕಾರ ಜಾರಿಗೆ ತಂದಿದೆ. ಯೋಜನೆಗಳು ಯಶಸ್ವಿಯಾಗಬೇಕಾದರೆ ಸಮಿತಿಯ ಸದಸ್ಯರು ಹಾಗೂ ಇಲಾಖೆಯ ಅಧಿಕಾರಿಗಳು ಪ್ರಾಂಜಲವಾದ ಮನಸ್ಸಿನಿಂದ ಕಾರ್ಯವನ್ನು ಮಾಡಿದಾಗ ಮಾತ್ರ ಸಮಿತಿಗೂ ಹಾಗೂ ಸರ್ಕಾರಕ್ಕೂ ಗೌರವ ಸಿಗುತ್ತದೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ತಾಪಂ ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-30-2076654749

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.