ವಡಗೇರಾ: ಪಟ್ಟಣದಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಜ್ಞ ವೈದ್ಯರ ನೇಮಕ ಹಾಗೂ ಬೆಂಡೆಬೆಂಬಳಿ ಗ್ರಾಮದಲ್ಲಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಉನ್ನತೀಕರಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ ಅವರಿಗೆ ಕಾಂಗ್ರೆಸ್ ಯುವ ಮುಖಂಡ ಸಂಜೀವ ಐರಡ್ಡಿ ಬೆಂಡೆಬೆಂಬಳಿ ಮನವಿಯನ್ನು ಸಲ್ಲಿಸಿದ್ದಾರೆ.

ಮನವಿ ಪತ್ರದಲ್ಲಿ, ‘ವಡಗೇರಾ ಪಟ್ಟಣದಲ್ಲಿ ಇರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಸ್ತ್ರಚಿಕಿತ್ಸಾ, ಹೃದಯ ರೋಗ ತಜ್ಞ, ಎಲಬು ಮತ್ತು ಕೀಲು ತಜ್ಞರು, ಕಣ್ಣಿನ ತಜ್ಞ ವೈದ್ಯರ ನೇಮಕ ಹಾಗೂ ಇಸಿಜಿ, ಎಕ್ಸರೇ ಮಷಿನ್ ಅಳವಡಿಕೆ ಹಾಗೂ ಇನ್ನಿತರ ಸಿಬ್ಬಂದಿ ನೇಮಕವನ್ನು ಮಾಡುವುದರ ಜತೆಗೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಂಜೂರಾದ ಜಮೀನಿನಲ್ಲಿ ಕಟ್ಟಡ ಕಾಮಗಾರಿಯನ್ನು ಆರಂಭಿಸಲುಕ್ರಮಗಳನ್ನು ಕೈಗೊಳ್ಳಬೇಕು ಹಾಗೆಯೆ ಮೂಲಸೌಕರ್ಯಗಳನ್ನು ಆಸ್ಪತ್ರೆಗೆ ಒದಗಿಸಬೇಕು’ ಎಂದಿದ್ದಾರೆ.

‘ಈ ಹಿಂದೆ ವಡಗೇರಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಕ್ಕಳ ಸಂತಾನ ಹರಣ ಶಸ್ತ್ರ ಚಿಕಿತ್ಸೆ ನಡೆಯುತ್ತಿತ್ತು ಆದರೆ ಇತ್ತೀಚಿಗೆ ಅದನ್ನು ಕೂಡಾ ಮುಚ್ಚಲಾಗಿದೆ ಇದರಿಂದ ಈ ಭಾಗದ ಮಹಿಳೆಯರಿಗೆ ತುಂಬಾ ತೊಂದರೆಯಾಗುತ್ತಿದೆ. ತುರ್ತು ಸಮಯದಲ್ಲಿ ಸಕಾಲದಲ್ಲಿ ರೋಗಿಗಳಿಗೆ ಚಿಕಿತ್ಸೆ ದೊರಕದೆ ಇರುವುದರಿಂದ ಜೀವ ಹಾನಿಯಾದ ಘಟನೆಗಳು ನಡೆದಿವೆ’ ಎಂದು ಉಲ್ಲೇಖಿಸಿದ್ದಾರೆ.

‘ವಡಗೇರಾ ತಾಲ್ಲೂಕಿನ ವ್ಯಾಪ್ತಿಯಲ್ಲಿ ಇರುವ ಬೆಂಡೆಬೆಂಬಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಉನ್ನತಿಕರಿಸಬೇಕು ಇದರಿಂದ ಈ ಭಾಗದ ಸುತ್ತ ಮುತ್ತಲಿನ ರೋಗಿಗಳಿಗೆ ಹಾಗೂ ಮಹಿಳೆಯರಿಗೆ ಬಹಳಷ್ಟು ಅನಕೂಲವಾಗುತ್ತದೆ ಕೂಡಲೆ ಕ್ರಮಗಳನ್ನು ಕೈಗೊಂಡು ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಒತ್ತಾಯಿಸಿದ್ದಾರೆ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-30-770902978

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.