ಯಾದಗಿರಿ: ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪಾರದರ್ಶಕವಾಗಿ ಮಾಡಲಾಗುತ್ತಿದ್ದು, ಇದಕ್ಕಾಗಿ ರಾಜಕೀಯ ಪಕ್ಷಗಳು ಸಹಕಾರ ನೀಡಬೇಕಿದೆ’ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಎಸ್ಐಆರ್ ಸಂಬಂಧ ರಾಜಕೀಯ ಪಕ್ಷಗಳ ಸರ್ಕಾರ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

‘ಭಾರತ ಚುನಾವಣಾ ಆಯೋಗವು ಈಗಾಗಲೇ ರಾಜ್ಯದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ವೇಳಾ ಪಟ್ಟಿಯನ್ನು ಗಮನಿಸಬೇಕು. ಯಾವುದೇ ದೂರುಗಳಿಗೆ ಅವಕಾಶ ನೀಡದೆ, ಜಿಲ್ಲಾಡಳಿತಕ್ಕೆ ಸಹಕರಿಸಬೇಕು’ ಎಂದರು.

‘ವಿಶೇಷ ಸಮಗ್ರ ಪರಿಷ್ಕರಣೆ ಸುಗಮವಾಗಿ ಕೈಗೊಳ್ಳಲು ಮತಗಟ್ಟೆ ಮಟ್ಟದ ಅಧಿಕಾರಿಗಳ ಜೊತೆಗೆ ಬೂತ್ ಮಟ್ಟದ ಏಜೆಂಟರನ್ನು ನೇಮಕ ಮಾಡಬೇಕು’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕೋಲಾರ, ಸಹಾಯಕ ಆಯುಕ್ತರು ಶ್ರೀಧರ ಗೋಟೂರ, ಕಾಂಗ್ರೆಸ್ ಮುಖಂಡ ಶ್ಯಾಮ್ಸನ್, ಬಿಜೆಪಿ ಮುಖಂಡ ಶಂಕರ್ ಸೂನಾರ್, ಬಿಎಸ್ಪಿ ಮುಖಂಡ ದೇವಾನಂದ್ ಕೊಳ್ಳಿ, ಜೆಡಿಎಸ್ ಮುಖಂಡ ಶಾಂತಪ್ಪ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-30-2035506924

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.