ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಬೈಕ್‌ ರ್‍ಯಾಲಿ ಮೂಲಕ ಮತದಾನ ಜಾಗೃತಿ

Last Updated 25 ಮಾರ್ಚ್ 2023, 5:25 IST
ಅಕ್ಷರ ಗಾತ್ರ

ಯಾದಗಿರಿ: ಭಾರತ ಚುನಾವಣಾ ಆಯೋಗ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಮತದಾರರಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದ ಅಂಗವಾಗಿ ನಗರದ ಸುಭಾಶ್ಚಂದ್ರಬೋಸ್ ವೃತ್ತದಲ್ಲಿ ಬೈಕ್‌ ರ್‍ಯಾಲಿಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಚಾಲನೆ
ನೀಡಿದರು.

ಈ ರ‍್ಯಾಲಿ ಸುಭಾಶ್ಚಂದ್ರ ಬೋಸ್ ವೃತ್ತದಿಂದ ಶಾಸ್ತ್ರೀ ವೃತ್ತ, ಡಾ. ಬಿ.ಆರ್.ಅಂಬೇಡ್ಕರ್ ಸರ್ಕಲ್, ಕನಕನಗರ, ನಗರಸಭೆ, ವೀರಶೈವ ಕಲ್ಯಾಣ ಮಂಟಪದಿಂದ ಮಹಾತ್ಮ ಗಾಂಧಿವೃತ್ತದವರೆಗೆ ತಲುಪಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಅಮರೇಶ ಆರ್ ನಾಯ್ಕ್‌, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಡಿಎಚ್‌ಒ ಡಾ.ಗುರುರಾಜ ಹಿರೇಗೌಡ, ಭೂ ವಿಜ್ಞಾನ ಇಲಾಖೆ ಅಧಿಕಾರಿ ಡಾ.ಪುಷ್ಪಾವತಿ ಕೆ.ಎನ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಲಕ್ಷ್ಮೀಕಾಂತ ಒಂಟೀಪೀರ, ಯಾದಗಿರಿ ತಹಶೀಲ್ದಾರ್‌ ಅಣ್ಣಾರಾವ್ ಪಾಟೀಲ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಭೈ, ಅಂಗವಿಕಲ ಇಲಾಖೆ ಅಧಿಕಾರಿ ಸಾಧಿಕ್ ಹುಸೇನ್ ಖಾನ್, ಜಿಲ್ಲಾ ಎನ್.ಆರ್.ಡಿ.ಎಂ.ಎಸ್ ಕೇಂದ್ರದ ಅಧಿಕಾರಿ ಸಿದ್ದರೆಡ್ಡಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕಿನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು
ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT