ಯಾದಗಿರಿ: ವನ್ಯಜೀವಿಗಳನ್ನು ಬೇಟೆಯಾಡಿ, ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಐವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

ಜಿಲ್ಲೆಯ ಕಕ್ಕೇರಾದ ಮೌನೇಶ ಜಟ್ಟೆಪ್ಪ(19), ದೇವಿಂದ್ರ ನಂದಪ್ಪ(19), ಚನ್ನಪ್ಪ ಗೋಪಾಲ(18), ಯಂಕಪ್ಪ ಬಸಣ್ಣ(40), ಬಸಣ್ಣ ಬಸಪ್ಪ(65) ಅವರನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳು ಮೊಲ, ನರಿ, ಮುಳ್ಳುಹಂದಿ, ಕೃಷ್ಣಮೃಗ ಮತ್ತು ಕಾಡು ಹಂದಿಗಳನ್ನು ಬೇಟೆಯಾಡಿ, ಅದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದರು.

ಪ್ರಾದೇಶಿಕ ಅರಣ್ಯ ವಿಭಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಬಿ. ಪಾಟೀಲ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮುನೀರ್ ಅಹ್ಮದ್, ರಮೇಶ ಕನಕಟ್ಟಿ, ವಲಯ ಅರಣ್ಯಾಧಿಕಾರಿ ಭಾಗಪ್ಪಗೌಡ, ಬುರಾನುದ್ದಿನ್, ರೇವಣಸಿದ್ದಪ್ಪ ತಾರಖೇಡ್ ಮತ್ತು ರಾಹುಲ್ ಸಾದುರೆ ಅವರ ನಿರ್ದೇಶನದಂತೆ ಕಾರ್ಯಚರಣೆ ನಡೆಸಿ, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ತಂಡದಲ್ಲಿ ಉಪ ವಲಯ ಅರಣ್ಯಾಧಿಕಾರಿ ಎಚ್.ಬಿ.ಬಿರಾದಾರ, ರಾಯನಗೌಡ, ಕಾಶಪ್ಪ, ಗಸ್ತು ಅರಣ್ಯ ಪಾಲಕ ಕಾಶೀನಾಥ ರಾಠೋಡ, ಮಲ್ಲಪ್ಪ ಚೌಧರಿ, ಲಾಲಮಹ್ಮದ್, ರಾಜು, ಚಿದಾನಂದಯ್ಯ ಹಿರೇಮಠ, ಅರಣ್ಯ ವೀಕ್ಷಕ ರವಿಕುಮಾರ, ವರುಣಕುಮಾರ, ಸಿಬ್ಬಂದಿ ನಾಗೇಶ ತಂಡದಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-35-2044494408

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.